ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಇದ್ದರೆ ಸಿದ್ಧರಾಮಯ್ಯ ರಿಂದ ರಾಜೀನಾಮೆ ಪಡೆಯಲಿ: ಯಶ್ಪಾಲ್ ಸುವರ್ಣ  

Spread the love

ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಇದ್ದರೆ ಸಿದ್ಧರಾಮಯ್ಯ ರಿಂದ ರಾಜೀನಾಮೆ ಪಡೆಯಲಿ: ಯಶ್ಪಾಲ್ ಸುವರ್ಣ  

ಉಡುಪಿ: ಕಾಂಗ್ರೆಸ್ ಪಕ್ಷಕ್ಕೆ ದೇಶದ ಸಂವಿಧಾನ, ನ್ಯಾಯಾಂಗ ವ್ಯವಸ್ಥೆಯ ಮೇಲೆ ಕಿಂಚಿತ್ ಗೌರವ, ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಇದ್ದರೆ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ರಾಜೀನಾಮೆ ಪಡೆಯಲಿ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡುವ ಮೂಲಕ ಸಿದ್ಧರಾಮಯ್ಯ ವಿರುದ್ಧ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ.

ಸಿದ್ಧರಾಮಯ್ಯ ಇಂತಹ ಪರಿಸ್ಥಿತಿಯಲ್ಲಿಯೂ ಅಧಿಕಾರದ ಆಸೆಯಿಂದ ರಾಜೀನಾಮೆ ನೀಡದೆ ಭಂಡತನ ಪ್ರದರ್ಶನ ಮಾಡಲು ಮುಂದಾದರೆ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ.

ಹಿಂದೆ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ದೊಡ್ಡ ಪ್ರತಿಭಟನೆ ಮಾಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರ ನೀಡಿದ್ದ ಪ್ರಾಸಿಕ್ಯೂಷನ್ ನೋಟೀಸ್ ವಜಾ ವಿರುದ್ಧ ಹೈಕೋರ್ಟ್ ತೀರ್ಪಿನಿಂದ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗವಾಗಿದೆ.

ಸಿದ್ಧರಾಮಯ್ಯ ತಕ್ಷಣ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ, ಕಾಂಗ್ರೆಸ್ ಪಕ್ಷ ರಾಜೀನಾಮೆ ಪಡೆಯಲು ಮುಂದಾಗದಿದ್ದಲ್ಲಿ ಸದಾ ಸಂವಿಧಾನ, ನ್ಯಾಯಾಂಗ, ಭ್ರಷ್ಟಾಚಾರ ನಿಯಂತ್ರಣದ ಬಗ್ಗೆ ಭಾಷಣ ಮಾಡುವ ಪಕ್ಷದ ನಕಲಿ ಮುಖವಾಡ ದೇಶದ ಜನತೆಯ ಮುಂದೆ ಕಳಚಿ ಬೀಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments