ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ರಮೇಶ್ ಕಾಂಚನ್ ಅರ್ಜಿ ಸಲ್ಲಿಕೆ

Spread the love

ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ರಮೇಶ್ ಕಾಂಚನ್ ಅರ್ಜಿ ಸಲ್ಲಿಕೆ

ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ಸೂಚನೆಯಂತೆ ಕಾಂಗ್ರೆಸ್ ಪಕ್ಷದಿಂದ 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸುವವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಅರ್ಜಿ ಸಲ್ಲಿಬೇಕೆಂದು ಮಾಹಿತಿ ನೀಡಿದ ಪ್ರಕಾರ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಆಕಾಂಕ್ಷಿಯಾಗಿ ಸ್ಪರ್ಧಿಸುವ ಆಕಾಂಕ್ಷೆ ಇದ್ದು ಅದರಂತೆ ಪಕ್ಷದ ಹಿರಿಯ, ಕಿರಿಯ ನಾಯಕರು ಹಾಗೂ ಹಿತೈಷಿಗಳ ಸಮ್ಮತಿ ಪಡೆದು ತಾ. 14.11.2022ರ ಸೋಮವಾರದಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, ಉಡುಪಿ ನಗರಸಭೆಯ ವಿರೋಧ ಪಕ್ಷದ ನಾಯಕರಾದ ರಮೇಶ್ ಕಾಂಚನ್ ಅವರು ಅರ್ಜಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಯೋಜಕರಾದ ಮುರಳಿ ಶೆಟ್ಟಿ, ಮಾಜಿ ಚಿಕ್ಕಮಂಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಾ. ವಿಜಯ್ ಕುಮಾರ್, ಮಾಜಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ವಿಶ್ವಾಸ್ ಅಮೀನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಗಣೇಶ್ ದೇವಾಡಿಗ, ಶರತ್ ಶೆಟ್ಟಿ, ಉಡುಪಿ ಕಾಂಗ್ರೆಸ್ ಮುಖಂಡರಾದ ಪ್ರಿತೇಶ್ ಪೂಜಾರಿ ಚಿಟ್ಪಾಡಿ, ಬ್ರಹ್ಮಾವರ ಬ್ಲಾಕ್ ಚಾಂತಾರು ಗ್ರಾಮ ಪಂಚಾಯತ್ ಸದಸ್ಯರಾದ ಸಂದೇಶ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ರಕ್ಷಿತ್, ರಿತೇಶ್ ಸಾಲ್ಯಾನ್, ಸಂಜಯ್ ಆಚಾರ್ಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು


Spread the love

Leave a Reply

Please enter your comment!
Please enter your name here