ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ‘ಸರ್ವ ಜನಾಂಗದ ಶಾಂತಿಯ ತೋಟ’ ಹೆಸರಿನಲ್ಲಿ ಬಿಡುಗಡೆ

Spread the love

ಸರ್ವ ಜನಾಂಗದ ಶಾಂತಿಯ ತೋಟ’ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ  ಇಂದು ಮಂಗಳವಾರ ಬಿಡುಗಡೆಯಾಗಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ, ಡಾ ಜಿ ಪರಮೇಶ್ವರ್ ಮೊದಲಾದ ನಾಯಕರ ಸಮ್ಮುಖದಲ್ಲಿ ಬಿಡುಗಡೆಯಾಯಿತು.

ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್​ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಜನರ ಜತೆ ಚರ್ಚಿಸಿದ ಬಳಿಕ ಪ್ರಣಾಳಿಕೆ ತಯಾರು ಮಾಡಿದ್ದೇವೆ. ಬೆಂಗಳೂರಿನ ಸಮಸ್ಯೆಗಳ ಗುರಿತಿಸಲು ಅನೇಕ ಸಂಸ್ಥೆಗಳ ಸಲಹೆ ಪಡೆದಿದ್ದೇವೆ. ನಮ್ಮ ಮುಖಂಡರ ಜತೆಗೂ ಚರ್ಚಿಸಿ ಪ್ರಣಾಳಿಕೆ ತಯಾರಿಸಿದ್ದೇವೆ. ‘ಸರ್ವ ಜನಾಂಗದ ಶಾಂತಿಯ ತೋಟ ಇದುವೆ ಕಾಂಗ್ರೆಸ್​ ಬದ್ಧತೆ’. ಈ ಘೋಷ ವಾಕ್ಯದೊಂದಿಗೆ ಪ್ರಣಾಳಿಕೆ ತಯಾರು ಮಾಡಿದ್ದೇವೆ. ಮುಂದಿನ 25 ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ಪ್ರಣಾಳಿಕೆ ತಯಾರಿ ಮಾಡಿದ್ದೇವೆ ಎಂದರು.

‘ಸರ್ವ ಜನಾಂಗದ ಶಾಂತಿಯ ತೋಟ,ಇದುವೆ ಕಾಂಗ್ರೆಸ್‌ ಬದ್ದತೆ’ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಕಾಂಗ್ರೆಸ್‌ ಬರಲಿದೆ ಪ್ರಗತಿ ತರಲಿದೆ ಎಂದು ಘೋಷ ವಾಕ್ಯವನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.

ಕಾಂಗ್ರೆಸ್ಸರ್ವ ಜನಾಂಗದ ಶಾಂತಿಯ ತೋಟಪ್ರಣಾಳಿಕೆ ಮುಖ್ಯಾಂಶಗಳು

 • ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್​
 • ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ
 • ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ.
 • ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು
 • ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ
 • ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ
 • ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ
 • ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ
 • ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ
 • ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ
 • ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ
 • ಬಿಸಿಯೂಟ ನೌಕರರ ಮಾಸಿಕ ಗೌರವಧನ 6 ಸಾವಿರ ರೂ.ಗೆ ಹೆಚ್ಚಳ
 • ರಾತ್ರಿ ಪಾಳಿಯ ಪೊಲೀಸ್​ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ
 • ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ
 • ಆದ್ಯತೆಯ ಮೇರೆಗೆ ಕಾಲ ಕಾಲಕ್ಕೆ ಎಲ್ಲಾ ಖಾಲಿ ಹುದ್ದೆಗಳ ಭರ್ತಿ
 • ನಾಲ್ಕು ವರ್ಷದೊಳಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ
 • ಪ್ರತಿ ಜಿಲ್ಲೆಯಲ್ಲೂ ಸುಸಜ್ಜಿತ ಸೈಬರ್ ಪೊಲೀಸ್ ಠಾಣೆಗಳ ನಿರ್ಮಾಣ
 • ಕನಕಪುರದಲ್ಲಿ ವಿಶ್ವದರ್ಜೆಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ
 • ತಾಲೂಕು ಪಂಚಾಯತ್​, ಗ್ರಾಮ ಪಂಚಾಯತ್​ಗಳಿಗೆ ಬಜೆಟ್​ನಲ್ಲಿ ಅನುದಾನ ಹೆಚ್ಚಳ
 • ಪ್ರತಿ ಗ್ರಾಮ ಪಂಚಾಯತ್​ನಲ್ಲಿ ಹೈಸ್ಪೀಡ್​ ವೈಫೈ ಹಾಟ್​​ಸ್ಪಾಟ್​ ಸ್ಥಾಪನೆ
 • ಪ್ರತಿ ವಿಭಾಗಕ್ಕೆ ಒಂದರಂತೆ ಕೃಷಿ ಬೆಲೆ ಆಯೋಗ ಸ್ಥಾಪನೆ
 • ದ್ರಾಕ್ಷಿ ಬೆಳೆಗಾರರಿಗೆ ಸಬ್ಸಿಡಿ ಒದಗಿಸಲು 500 ಕೋಟಿ ರೂ.
 • ರಬ್ಬರ್ ಕೃಷಿಗಾಗಿ 25 ಕೋಟಿ ರೂ. ವಿಶೇಷ ಪ್ಯಾಕೇಜ್​
 • ಮೊದಲ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಮಂಡನೆ
 • SC-ST ಒಳ ಮೀಸಲಾತಿಗೆ ನ್ಯಾಯ ಕೊಡಿಸಲು ಕಾಂಗ್ರೆಸ್ ಬದ್ಧ
 • ಕರ್ನಾಟಕ ಕಾಫಿ ಉತ್ತೇಜನಕ್ಕಾಗಿ ಕಾಫಿ ಕರ್ನಾಟಕ ಬ್ರ್ಯಾಂಡ್​ ಸೃಷ್ಟಿ
 • ಸಾವಯವ ಕೃಷಿ ಉತ್ತೇಜನಕ್ಕಾಗಿ 2,500 ಕೋಟಿ ರೂ. ಹೂಡಿಕೆ


Spread the love