ಕಾಂಗ್ರೆಸ್ ವತಿಯಿಂದ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ

Spread the love

ಕಾಂಗ್ರೆಸ್ ವತಿಯಿಂದ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ

ಮಂಗಳೂರು: ಇತಿಹಾಸ ಪ್ರಸಿದ್ಧಿ ಮಂಗಳೂರಿನ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಹಸಿರು ಹೊರೆಕಾಣಿಕೆ ಮೆರವಣಿಗೆಯಲ್ಲಿ ಪಾಲ್ಗೊಂಡರು.

ಜಿಲ್ಲಾ ಕಾಂಗ್ರೆಸ್ ಕಛೇರಿಯಿಂದ ದೀಪ ಬೆಳಗಿಸುವುದರ ಮೂಲಕ ವಿಧಾನಪರಿಷತ್ ಸದಸ್ಯರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಜೆ.ಆರ್. ಲೋಬೊ ರವರು ಮಾತನಾಡಿ ಅತೀ ಪುರಾತನ ದೇವಸ್ಥಾನಗಳಲ್ಲಿ ಒಂದಾದ ಕದ್ರಿ ಮಂಜುನಾಥೇಶ್ವರ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ನಡೆಯುವ ಈ ಹಸಿರು ಹೊರೆಕಾಣಿಕೆ ಮೆರವಣಿಗೆಯಲ್ಲಿ ಪಾಲ್ಗೊಳ್ಳುವುದು ನಮಗೆಲ್ಲರಿಗೂ ಅತೀ ಸಂತಸವನ್ನುಂಟು ಮಾಡಿದೆ. ದೇವರು ಎಲ್ಲರಿಗೂ ಒಂದೇ. ಎಲ್ಲಾ ಧರ್ಮದವರು ಸಹಬಾಳ್ವೆಯಿಂದ ನಡೆದುಕೊಳ್ಳುವುದು ಎಲ್ಲಾ ಧರ್ಮದ ಸಾರವಾಗಿದೆ. ಈ ಸಂದರ್ಭದಲ್ಲಿ ಶ್ರೀ ಮಂಜುನಾಥ ಸ್ವಾಮಿ ನಾಡಿನ ಸಮಸ್ತ ಜನತೆಗೆ ಉತ್ತಮ ಆಯುರಾರೋಗ್ಯ ನೀಡಿ ಸಮಾಜಕ್ಕೆ ಶಾಂತಿ ಸೌಹಾರ್ದತೆಯನ್ನು ನೀಡಲಿ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಪಕ್ಷದ ಮುಖಂಡರುಗಳಾದ ವಿಶ್ವಾಸ್ ಕುಮಾರ್ ದಾಸ್, ಅಬ್ದುಲ್ ಸಲೀಂ, ಟಿ.ಕೆ. ಸುಧೀರ್, ನೀರಜ್ ಪಾಲ್, ರಮಾನಂದ ಪೂಜಾರಿ, ಸದಾಶಿವ ಉಳ್ಳಾಲ್, ಸಂತೋಷ್ ಶೆಟ್ಟಿ, ನಮಿತಾ ಡಿ ರಾವ್, ಶೋಭಾ ಕೇಶವ್, ದುರ್ಗಾ ಪ್ರಸಾದ್, ಮಕ್ಬೂಲ್ ಅಹ್ಮದ್, ವಿಜಯ ಬಾಬು, ಯಶವಂತ್, ದಿನೇಶ್ ಕುಂಪಲ, ಸಮರ್ಥ್ ಭಟ್ ಕೃತಿನ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.


Spread the love