ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಎಚ್.ವೈ.ಮೇಟಿ ನಿಧನ

Spread the love

ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಎಚ್.ವೈ.ಮೇಟಿ ನಿಧನ

ಬಾಗಲಕೋಟೆ: ಕಾಂಗ್ರೆಸ್‌ನ ಹಿರಿಯ ಶಾಸಕ, ಮಾಜಿ ಸಚಿವ ಎಚ್.ವೈ.ಮೇಟಿ(79) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದಾಗಿ ಶಾಸಕ ಎಚ್.ವೈ.ಮೇಟಿ ಅವರು ಬೆಂಗಳೂರಿನ ಅಪೊಲೊ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಎಚ್.ವೈ. ಮೇಟಿ, ಜಿಲ್ಲೆಯ ತಿಮ್ಮಾಪುರದಲ್ಲಿ 1946 ಅಕ್ಟೋಬರ್ 9ರಂದು ಜನಿಸಿದ್ದರು. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದ  ಎಚ್.ವೈ. ಮೇಟಿ, 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್​ನಿಂದ 2ನೇ ಬಾರಿ ಗೆಲುವು ಸಾಧಿಸಿ ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಂತರ 1996ರಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದು, 2004ರಲ್ಲಿ ಮತ್ತೆ ಗುಳೇದಗುಡ್ಡ ಕ್ಷೇತ್ರದಿಂದ  ಗೆದ್ದಿದ್ದರು.


Spread the love
Subscribe
Notify of

0 Comments
Inline Feedbacks
View all comments