ಕಾಟಿಪಳ್ಳದಲ್ಲಿ ಯುವಕನ ಹತ್ಯೆ ಪ್ರಕರಣ; ನಾಲ್ವರು ಪೊಲೀಸ್ ವಶಕ್ಕೆ

Spread the love

ಕಾಟಿಪಳ್ಳದಲ್ಲಿ ಯುವಕನ ಹತ್ಯೆ ಪ್ರಕರಣ; ನಾಲ್ವರನ್ನು ಪೊಲೀಸ್ ವಶಕ್ಕೆ

ಮಂಗಳೂರು: ಕಾಟಿಪಳ್ಳ ವೃತ್ತದ ಬಳಿ ಯುವಕನನ್ನು ಹಾಡುಹಗಲೇ ಹತ್ಯೆಗೈದ ಪ್ರಕರಣಕ್ಕೆ ಸಂಬಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಕಾಟಿಪಳ್ಳ ಕೈಕಂಬದ ನಿವಾಸಿ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳ ತಂಡವೊಂದು ಹಾಡಹಗಲೇ ಬರ್ಬರವಾಗಿ ಹತ್ಯೆಗೈದಿತ್ತು.

ಪ್ರಕರಣಕ್ಕೆ ಸಂಬಂದಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ ದುಷ್ಕರ್ಮಿಗಳು ಪರಾರಿಯಾಗುತ್ತಿದ್ದ ಕಾರನ್ನು ಹಿಂಬಾಲಿಸಿದೆ. ಮಿಜಾರಿನಲ್ಲಿ ಕಾರನ್ನು ಪತ್ತೆ ಹಚ್ಚಿದ ಪೊಲೀಸರು ಕಾರನ್ನು ಚೇಸ್ ಮಾಡಿ ಪೈರಿಂಗ್ ನಡೆಸಿದ್ದಾರೆ ಎನ್ನಲಾಗಿದೆ. ಆರೋಪಿಗಳ ಪೈಕಿ ಒರ್ವನ ಕಾಲಿಗೆ ಗುಂಡು ತಗಲಿದ್ದು, ಕಾರಿನಲ್ಲಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.


Spread the love