ಕಾಟಿಪಳ್ಳ ಯುವಕನ ಕೊಲೆ; ಕಮೀಷನರೇಟ್ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ

Spread the love

ಕಾಟಿಪಳ್ಳ ಯುವಕನ ಕೊಲೆ; ಕಮೀಷನರೇಟ್ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ

ಮಂಗಳೂರು: ಕಾಟಿಪಳ್ಳ ಸಮೀಪ ನಡೆದ ಯುವಕನ ಕೊಲೆಗೆ ಸಂಬಂಧಿಸಿದಂತೆ ನಗರ ಪೋಲಿಸ್ ಆಯುಕ್ತ ಟಿ.ಆರ್. ಸುರೇಶ್ ಅವರು ಕಮೀಷನರೇಟ್ ವ್ಯಾಪ್ತಿಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 35 ಅನ್ವಯ ನಿರ್ಬಂಧಕಾಜ್ಞೆ ಹೊರಡಿಸಿ ಆದೇಶಿಸಿದ್ದಾರೆ.

ಜನವರಿ 3 ರಂದು ರಾತ್ರಿ 10 ಗಂಟೆಯಿಂದ ಜನವರಿ 4 ರಂದು ರಾತ್ರಿ 10 ಗಂಟೆಯವರೆಗೆ ನಿರ್ಬಂಧಕಾಜ್ಞೆ ಹೊರಡಿಸಿ ಆದೇಶ ನೀಡಿದ್ದಾರೆ. ಅದರಂತೆ ನಗರ ಪೋಲಿಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಾಸ್ತಾರೋಕೊ, ಮುತ್ತಿಗೆ ಮೊದಲಾದವುಗಳನ್ನು ನಿರ್ಬಂಧಿಸಿ ಆದೇಶಿಸಿದ್ದಾರೆ.

ಕಮಿಷನರೆಟ್ ವ್ಯಾಪ್ತಿಗೆ ಬರುವ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಘಟನೆಗಳು ಮರುಕಳಿಸದಂತೆ ತಡೆಗಟ್ಟುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರ ಪ್ರಕಟನೆ ತಿಳಿಸಿದೆ.


Spread the love