ಕಾಪು, ಉಡುಪಿ, ಕಾರ್ಕಳ ಕುಂದಾಪುರದಲ್ಲಿ ಬಿಜೆಪಿ, ಬೈಂದೂರಿನಲ್ಲಿ ಕಾಂಗ್ರೆಸ್ ಮುನ್ನಡೆ

Spread the love

ಕಾಪು, ಉಡುಪಿ, ಕಾರ್ಕಳ ಕುಂದಾಪುರದಲ್ಲಿ ಬಿಜೆಪಿ, ಬೈಂದೂರಿನಲ್ಲಿ ಕಾಂಗ್ರೆಸ್ ಮುನ್ನಡೆ

  • ಇವಿಎಂ ಮತ ಎಣಿಕೆ ಆರಂಭ: ಕಾಪು ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ 1310 ಮತಗಳಿಂದ ಮುನ್ನಡೆ
  • ಉಡುಪಿಯಲ್ಲಿ ಮೊದಲ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ 3,500 ಮತಗಳ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಅವರು ಆರಂಭಿಕ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 2,000 ಮತಗಳಿಂದ ಮುನ್ನಡೆ
  • ಕಾರ್ಕಳ ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ವಿ. ಸುನಿಲ್ ಕುಮಾರ್ 5,106 ಮತಗಳು, ಮುನಿಯಾಲು ಉದಯ್ ಕುಮಾರ್ ಶೆಟ್ಟಿ 4,935 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ವಿ ಸುನಿಲ್ ಕುಮಾರ್ 171 ಮತಗಳ ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಬೈಂದೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರುರಾಜ್ ಗಂಟಿಹೊಳೆ 3,696 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 5,643 ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ಕೆ ಗೋಪಾಲ ಪೂಜಾರಿ 2,147 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಕುಂದಾಪುರ ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ 5,970 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ 3,418 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ವಿರುದ್ದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ 2,552 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಕಾಪು ವಿಧಾನಸಭಾ ಕ್ಷೇತ್ರದ ಮೂರನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರ್ಮೆ ಸುರೇಶ್ ಶೆಟ್ಟಿ 12,103 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ನ ವಿನಯ್ ಕುಮಾರ್ ಸೊರಕೆ 9,390 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ಬಿಜೆಪಿಯ ಗುರ್ಮೆ ಸುರೇಶ್ ಶೆಟ್ಟಿ 2,713 ಮತಗಳ ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಕಾರ್ಕಳ ವಿಧಾನಸಭಾ ಕ್ಷೇತ್ರದ ಮೂರನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು ಬಿಜೆಪಿಯ ಸುನಿಲ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಉದಯ್ ಕುಮಾರ್ ಶೆಟ್ಟಿಯವರಿಂದ 639 ಮತಗಳ ಅಂತರದಲ್ಲಿ ಮುನ್ನಡೆ ಹೊಂದಿದ್ದಾರೆ.
  • ಬೈಂದೂರು ವಿಧಾನಸಭಾ ಕ್ಷೇತ್ರದ 4ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರುರಾಜ್ ಗಂಟಿಹೊಳೆ 18,476 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ 20,686 ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ಕೆ ಗೋಪಾಲ ಪೂಜಾರಿ 2,210 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಕಾರ್ಕಳ ವಿಧಾನಸಭಾ ಕ್ಷೇತ್ರದ ಐದನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ವಿ. ಸುನಿಲ್ ಕುಮಾರ್ 30,411 ಮತಗಳು, ಮುನಿಯಾಲು ಉದಯ್ ಕುಮಾರ್ ಶೆಟ್ಟಿ 28,351 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ವಿ ಸುನಿಲ್ ಕುಮಾರ್ 2,060 ಮತಗಳ ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಉಡುಪಿ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ 7 ಗಂಟೆಗೆ ಆರಂಭವಾಗಿದೆ.


ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10 ರಂದು ಚುನಾವಣೆ ನಡೆದಿದ್ದು ಉಡುಪಿ ಜಿಲ್ಲೆಯ ಬೈಂದೂರು ಕುಂದಾಪುರ, ಕಾರ್ಕಳ, ಕಾಪು ಮತ್ತು ಉಡುಪಿ ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಅಜ್ಜರಕಾಡು ಸೈಂಟ್ ಸಿಸಿಲಿಸ್ ಶಿಕ್ಷಣ ಸಂಸ್ಥೆಯಲ್ಲಿ ಬಿಗಿ ಭದ್ರತೆಯೊಂದಿಗೆ ಆರಂಭವಾಗಿದೆ.

ಕಾಲಿಗೆ ಮೊಬೈಲ್ ಕಟ್ಟಿಕೊಂಡು ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಬೈಂದೂರು ಬಿಜೆಪಿ ಏಜೆಂಟ್

ಕಾಲಿಗೆ ಮೊಬೈಲ್ ಕಟ್ಟಿಕೊಂಡು ಮತದಾನ ಕೇಂದ್ರಕ್ಕೆ ಆಗಮಿಸಿದ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯಲರ್ಥಿಯ ಏಜಂಟ್ ನನ್ನು ದ್ವಾರದಲ್ಲೇ ತಡೆದು ಪೊಲೀಸರು ವಾಪಾಸು ಕಳುಹಿಸಿದ್ದಾರೆ.

ಬಲಗಾಲಿನಲ್ಲಿ ಮೊಬೈಲ್ ನ್ನು ಕಟ್ಟಿಕೊಂಡು ಕೇಸರಿ ಶಾಲನ್ನು ಧರಿಸಿಕೊಂಡು ಪೊಲೀಸರ ಕಣ್ಣು ತಪ್ಪಿಸಲು ಯತ್ನಿಸಿದ್ದ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಪರವಾದ ಬಿಜೆಪಿ ಏಜೆಂಟ್ ಸದಾಶಿವ ಕಂಚಿಗೋಡು ಎಂಬಾತನನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚಿಂದ್ರ ಹಾಕೆ ದ್ವಾರದಲ್ಲೇ ತಡೆಹಿಡಿದು ವಾಪಾಸು ಕಳುಹಿಸಿದರು

 

ಉಡುಪಿ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಕ್ಷಣಗಣನೆ ಆರಂಭ

ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಉಡುಪಿ ಜಿಲ್ಲೆಯಲ್ಲಿ ಶನಿವಾರ ಕ್ಷಣಗಣನೆ ಆರಂಭವಾಗಿದೆ.

ಉಡುಪಿ ಜಿಲ್ಲೆಯ 5 ಕ್ಷೇತ್ರಗಳ ಫಲಿತಾಂಶ ತೀವ್ರ ಕೂತೂಹಲ ಮೂಡಿಸಿದ್ದು ಉಡುಪಿಯ ಸೈಂಟ್ ಸಿಸಿಲಿ ಕಾಂನ್ವೆಂಟ್ ನಲ್ಲಿ ನಡೆಯಲಿರುವ ಮತ ಎಣಿಕೆ ಸಂಪೂರ್ಣ ಸಿದ್ದವಾಗಿದೆ. ಬೆಳಿಗ್ಗೆ 7.30 ಕ್ಕೆ ಸ್ಟ್ರಾಂಗ್ ರೂಂಗಳನ್ನು ತೆರೆಯಲಾಗುವುದು. ಬಳಿಕ 8 ಗಂಟೆಗೆ ಅಂಚೆ ಮತದಾನ ಎಣಿಕೆ ಆರಂಭವಾಗಲಿದ್ದು, 8.30 ಕ್ಕೆ ವಿದ್ಯುನ್ಮಾನ ಮತಯಂತ್ರಗಳ ಮತ ಎಣಿಕೆ ಆರಂಭವಾಗಲಿದೆ.

ಮುನ್ನೆಚ್ಚರಿಕೆ ಕ್ರಮದ ದೃಷ್ಟಿಯಿಂದ ಪ್ರತಿ ಟೇಬಲ್ಗೆ ಸಿಸಿ ಟಿವಿ ಅಳವಡಿಕೆ ಮಾಡಲಾಗಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಮತ ಏಣಿಕೆ ಕೇಂದ್ರದ ಬಳಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಮತ ಎಣಿಕಾ ಕೇಂದ್ರದಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು ಎಣಿಕಾ ಕೇಂದ್ರದ ದ್ವಾರದಲ್ಲಿ ಸಿಬ್ಬಂದಿಗಳನ್ನು ಪರಿಶೀಲಿಸಿ ಪೊಲೀಸರು ಒಳಗಡೆ ಬಿಡುತ್ತಿದ್ದಾರೆ. ಎಣಿಕಾ ಕೇಂದ್ರದ ಸುತ್ತಮುತ್ತ ಪೊಲೀಸರ ನಿಯೋಜನೆ ಮಾಡಲಾಗಿದ್ದು ಕರ್ತವ್ಯಕ್ಕೆ ಒಂದುವರೆ ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ.

ಕ್ಷೇತ್ರವಾರು ಮತ ಎಣಿಕೆ ಫಲಿತಾಂಶ


Spread the love

Leave a Reply

Please enter your comment!
Please enter your name here