ಕಾಪು: ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ

Spread the love

ಕಾಪು: ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ

ಉಡುಪಿ: ವ್ಯಕ್ತಿಯೋರ್ವನನ್ನು ಇರಿದು ಕೊಲೆ ಮಾಡಿದ ಘಟನೆ ಕಾಪು ತಾಲೂಕಿನ ಪಾಂಗಾಳ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.

ಮೃತ ವ್ಯಕ್ತಿಯನ್ನು ಪಾಂಗಾಳ ನಿವಾಸಿ ಶರತ್ ಶೆಟ್ಟಿ (36) ಎಂದು ಗುರುತಿಸಲಾಗಿದೆ.

ಪ್ರಾಥಮಿಕ ಮೂಲಗಳ ಪ್ರಕಾರ ಇಬ್ಬರು ದುಷ್ಕರ್ಮಿಗಳು ಶರತ್ ಶೆಟ್ಟಿಯನ್ನು ಚೂರಿಯಿಂದ ಇರಿದಿದ್ದು, ಗಂಭೀರ ಗಾಯಗೊಂಡ ಶರತ್ ಶೆಟ್ಟಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಶರತ್ ಶೆಟ್ಟಿ ಭೂವ್ಯವಹಾರ ನಡೆಸಿಕೊಂಡಿದ್ದು ಇದೇ ವಿಚಾರಕ್ಕೆ ಕೊಲೆ ನಡೆದಿರುಬಹುದು ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love