ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ರಾಕೇಶ್ ಕುಂಜೂರು

Spread the love

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ರಾಕೇಶ್ ಕುಂಜೂರು

ಕಾಪು : ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಉದಯವಾಣಿ ಪತ್ರಿಕೆಯ ಕಾಪು ವರದಿಗಾರ ರಾಕೇಶ್ ಕುಂಜೂರು ಆಯ್ಕೆಯಾಗಿದ್ದಾರೆ.

ಕಾಪು ಪ್ರೆಸ್ ಕ್ಲಬ್ನಲ್ಲಿ ಮಂಗಳವಾರ ಜರಗಿದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.

ಉಪಾಧ್ಯಕ್ಷ ವಿಜಯ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಶಫಿ ಅಹ್ಮದ್ ಉಚ್ಚಿಲ, ಕೋಶಾಧಿಕಾರಿ ಪುಂಡಲೀಕ ಮರಾಠ, ಜೊತೆ ಕಾರ್ಯದರ್ಶಿ ಪ್ರಕಾಶ್ ಸುವರ್ಣ ಕಟಪಾಡಿ, ಕ್ರೀಡಾ ಕಾರ್ಯದರ್ಶಿ ಪ್ರಕಾಶ್ ಸುವರ್ಣ ಕಟಪಾಡಿ, ಪ್ರೆಸ್ ಕ್ಲಬ್ ಕೊ ಆರ್ಡಿನೇಟರ್ ಸಂತೋಷ್ ಕಾಪು ಅವರನ್ನು ಆಯ್ಕೆ ಮಾಡಲಾಯಿತು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು ಚುನಾವಣಾಧಿಕಾರಿಯಾಗಿ ಭಾಗವಹಿಸಿದರು. ಸಂಘದ ಅಧ್ಯಕ್ಷ ಪ್ರಮೋದ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷ ರಾಮಚಂದ್ರ ಆಚಾರ್ಯ ಬಾಲಕೃಷ್ಣ ಪೂಜಾರಿ, ಪ್ರಕಾಶ್ ಸುವರ್ಣ ಕಟಪಾಡಿ ಮೊದಲಾದವರು ಉಪಸ್ಥಿತರಿದ್ದರು.


Spread the love