ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪ್ರಕಾಶ ಸುವರ್ಣ ಕಟಪಾಡಿ ಆಯ್ಕೆ

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ  ಅಧ್ಯಕ್ಷರಾಗಿ ಪ್ರಕಾಶ ಸುವರ್ಣ ಕಟಪಾಡಿ ಆಯ್ಕೆ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆಯಾದ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಕಾಶ ಸುವರ್ಣ ಕಟಪಾಡಿ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಕರುಣಾಕರ್ ನಾಯಕ್ ಪಡುಬಿದ್ರಿ, ಉಪಾಧ್ಯಕ್ಷರಾಗಿ ವಿಜಯ ಆಚಾರ್ಯ ಉಚ್ಚಿಲ, ಕೋಶಾಧಿಕಾರಿಯಾಗಿ ಸಂತೋಷ್ ನಾಯ್ಕ್ ಕಾಪು, ಜತೆಕಾರ್ಯದರ್ಶಿಯಾಗಿ ರಾಕೇಶ್ ಕುಂಜೂರು, ಕ್ರೀಡಾ ಮತ್ತು ಸಾಂಸ್ಕøತಿಕ ಕಾರ್ಯದರ್ಶಿಯಾಗಿ ಹೇಮನಾಥ್ ಪಡುಬಿದ್ರಿ, ಪ್ರೆಸ್ ಕ್ಲಬ್ ನಿರ್ವಾಹಕರಾಗಿ ಪ್ರಮೋದ್ ಸುವರ್ಣ ಕಟಪಾಡಿ, ಹಿರಿಯ ಸಲಹೆಗಾರರಾಗಿ ರಾಮಚಂದ್ರ ಆಚಾರ್ಯ ಪಡುಬಿದ್ರಿ, ಪುಂಡಲೀಕ ಮರಾಠೆ ಶಿರ್ವ, ಬಾಲಕೃಷ್ಣ ಪೂಜಾರಿ ಉಚ್ಚಿಲ, ಕಾನೂನು ಸಲಹೆಗಾರರಾಗಿ ಅಶೀದುಲ್ಲಾ ಕಟಪಾಡಿ ಆಯ್ಕೆಯಾಗಿದ್ದಾರೆ.

ಕಾಪು ಪ್ರೆಸ್‍ಕ್ಲಬ್‍ನಲ್ಲಿ ಮಂಗಳವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಮುಂದಿನ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು ಮತ್ತು ಪ್ರಧಾನ ಕಾರ್ಯದರ್ಶಿ ಸಂತೋಷ್ ಸರಳೇಬೆಟ್ಟು ಚುನಾವಣಾಧಿಕಾರಿಗಳಾಗಿ ಭಾಗವಹಿಸಿದ್ದರು.

ನಿರ್ಗಮನ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಎರ್ಮಾಳ್, ಕೋಶಾಧಿಕಾರಿ ಪ್ರಮೋದ್ ಸುವರ್ಣ ಗತವರ್ಷದ ವರದಿ ಹಾಗೂ ಲೆಕ್ಕಪತ್ರಗಳನ್ನು ಮಂಡಿಸಿ, ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು. ಇದೇ ಸಂದರ್ಭ ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು ಅವರು ಕಾಪು ಪ್ರೆಸ್ ಕ್ಲಬ್‍ನ್ನು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವಾಗಿ ಮಾರ್ಪಡುಗೊಂಡಿರುವುದನ್ನು ಅಧೀಕೃತವಾಗಿ ಘೋಷಿಸಿದರು.