ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಸಿಎಮ್‌ ಬೊಮ್ಮಾಯಿ

Spread the love

ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಸಿಎಮ್‌ ಬೊಮ್ಮಾಯಿ

ಉಡುಪಿ: ಜಿಲ್ಲೆಯ ಕಾಪು ನಲ್ಲಿರುವ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿ ಮಾರಿಯಮ್ಮ ದೇವಿಯ ದರ್ಶನ ಪಡೆದರು.

ಇದೇ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನು ಪರಿಶೀಲಿಸಿದರು. ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿ ಸುನೀಲ್ ಕುಮಾರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Spread the love