ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಯಲ್ಲಿ ಸಿಲುಕಿ ಸಾವು

Spread the love

ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಯಲ್ಲಿ ಸಿಲುಕಿ ಸಾವು

ಉಡುಪಿ: ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೋರ್ವ ಬಲೆಗೆ ಸಿಲುಕಿ ಮೃತಪಟ್ಟ ಘಟನೆ ನಡದಿದೆ. ಕಾಪು ಸಮೀಪದ ಲೈಟ್ ಹೌಸ್ ಬಳಿ ಸೋಮವಾರ ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ.

ಮೃತಪಟ್ಟ ಮೀನುಗಾರನನ್ನು ಕಾಪು ಗರಡಿ ಬಳಿ ನಿವಾಸಿ ಕಾಸ್ಮರ್ (65) ಎಂದು ಗುರುತಿಸಲಾಗಿದೆ.

ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಅವರು, ಮೀನುಗಾರಿಕೆಯಲ್ಲಿ ನಿರತರಾಗಿದ್ದ ವೇಳೆಯೇ ಬಲೆಯೊಳಗೆ ಸಿಲುಕಿದ್ದರು. ಸಮುದ್ರಕ್ಕೆ ಬಿದ್ದವರು, ಅಲ್ಲೇ ಮೃತಪಟ್ಟಿರಬೇಕೆಂದು ಸಂಶಯಿಸಲಾಗಿದೆ.

ಕಾಸ್ಮಾರ್ ನೀರಿನಲ್ಲಿ ಮುಳುಗುತ್ತಿರುವುದನ್ನು ಸ್ಥಳೀಯ ಮೀನುಗಾರರು ಗಮನಿಸಿದ್ದು, ತಕ್ಷಣ ಅವರ ನೆರವಿಗೆ ಧಾವಿಸಿದರು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು.ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು.

ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.


Spread the love