ಕಾಪು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ  ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ಡಿಕ್ಕಿ ಗಂಭೀರ ಗಾಯ

Spread the love

ಕಾಪು: ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ಡಿಕ್ಕಿ ಹೊಡೆದು ಗಂಭಿರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ಕಾಪು ಕೊಪ್ಪಲಂಗಡಿ ಬಳಿ ಸೋಮವಾರ ಸಂಜೆ ನಡೆದಿದೆ.

ಗಾಯಗೊಂಡ ವ್ಯಕ್ತಿಯನ್ನು ಬಾಗಲಕೋಟೆ ಮೂಲದ ಕೂಲಿ ಕಾರ್ಮಿಕ ಲಿಂಗಪ್ಪ (25) ಎಂದು ಗುರುತಿಸಲಾಗಿದೆ.

14670003

ಸೋಮವಾರ ಸಂಜೆ ಸುಮಾರು 8 ಗಂಟೆಯ ಹೊತ್ತಿಗೆ ಲಿಂಗಪ್ಪ ಕೊಪ್ಪಲಂಗಡಿ ಬಳಿ ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿ ಡಿಕ್ಕಿ

ಹೊಡೆದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ತೀವ್ರ ರಕ್ತಸ್ರಾವಕ್ಕೊಳಗಾಗಿದ್ದ ಗಾಯಾಳು ಲಿಂಗಪ್ಪ ಅವರಿಗೆ ಸ್ಥಳೀಯ ಪ್ರಶಾಂತ್ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ ಬಳಿಕ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಪು ಪೋಲಿಸರು ಸ್ಥಳಕ್ಕೆ ಭೇಟಿ ನಿಡಿದ್ದಾರೆ


Spread the love