ಕಾರಿಗೆ ಬಸ್ ಡಿಕ್ಕಿ: ಓರ್ವ ಸಾವು

Spread the love

ಕಾರಿಗೆ ಬಸ್ ಡಿಕ್ಕಿ: ಓರ್ವ ಸಾವು

ಮೈಸೂರು: ತಾಲೂಕಿನ ವರುಣ ಸಮೀಪ ಮೈಸೂರು-ತಿ.ನರಸೀಪುರ ರಸ್ತೆಯಲ್ಲಿ ಸೋಮವಾರ ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ನಗರದ ಕೆ.ಸಿ.ಲೇಔಟ್ ನಿವಾಸಿ ಸಾಗರ್ (34) ಮೃತ. ಸಾಗರ್ ಪಿಲ್ಲಳ್ಳಿ ಗ್ರಾಮದಲ್ಲಿ ಪೌಲ್ಟ್ರಿ ಫಾರಂ ನಡೆಸುತ್ತಿದ್ದರು. ಸೋಮವಾರ ಮಧ್ಯಾಹ್ನ ತಮ್ಮ ಪೌಲ್ಟ್ರಿ ಫಾರ್ಮ್ ನೋಡಿಕೊಂಡು ಮೈಸೂರಿಗೆ ಕಾರಿನಲ್ಲಿ ಒಬ್ಬರೆ ಹಿಂದಿರುಗುವಾಗ ಅವಘಡ ನಡೆದಿದೆ. ವರುಣ ಸಮೀಪದ ವರಕೋಡು ಬಳಿ ಮೈಸೂರಿನಿಂದ ತಿ.ನರಸೀಪುರ ಮಾರ್ಗವಾಗಿ ಹೋಗುತ್ತಿದ್ದ ಖಾಸಗಿ ಬಸ್, ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಸಾಗರ್ ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಪೈಕಿ ಐವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ನಗರದ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಈ ಸಂಬಂಧ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ವೇಳೆ ಮೈಸೂರು-ತಿ.ನರಸೀಪುರ ರಸ್ತೆಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ತಕ್ಷಣ ಸ್ಥಳಕ್ಕಾಗಮಿಸಿದ ವರುಣ ಪೊಲೀಸರು ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಮೃತ ದೇಹವನ್ನು ಮೈಸೂರು ಮೆಡಿಕಲ್ ಕಾಲೇಜಿನ ಶವಾಗಾರಕ್ಕೆ ರವಾನಿಸಿದರು.


Spread the love