ಕಾರು ಅಪಘಾತ: ಮಗು ಸಾವು, ಆರು ಮಂದಿಗೆ ಗಂಭೀರ ಗಾಯ

Spread the love

ಕಾರು ಅಪಘಾತ: ಮಗು ಸಾವು, ಆರು ಮಂದಿಗೆ ಗಂಭೀರ ಗಾಯ

ಹನೂರು: ಭೀಕರ ಕಾರು ಅಪಘಾತದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕಿದ್ದ ಮಗುವೊಂದು ಮೃತಪಟ್ಟು ಜತೆಗಿದ್ದ ಒಂದೇ ಕುಟುಂಬದ ಆರು ಮಂದಿ ಗಂಭೀರ ಗಾಯಗೊಂಡಿರುವ ಕರುಣಾಜನಕ ಘಟನೆ ಹನೂರು ತಾಲೂಕಿನ ಮಂಗಲ ಸಮೀಪದ ಹುಲುಸುಗುಡ್ಡೆ ಬಳಿ ನಡೆದಿದೆ.

ಮೈಸೂರು ತಾಲೂಕು ಮಾರ್ಬಳ್ಳಿ ಗ್ರಾಮದ ತನ್ಮಯ್ (3) ಮೃತ ಮಗು. ಹಾಗೂ ಒಂದೇ ಕುಟುಂಬದ ಮಂಜುಳ, ಸಾಕಮ್ಮ, ಕಿರಣ್, ಚಂದನ್, ಸಣ್ಣ ತಾಯಮ್ಮ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಉಲುಸುಗುಡ್ಡೆ ಸಮೀಪ ಕಾರು ಚಾಲಕನ ನಿಯಂತ್ರಣ ತಪ್ಪಿ ಬಲಭಾಗದ ರಸ್ತೆಯಿಂದ ಎಡಭಾಗಕ್ಕೆ ಚಲಿಸಿ ಎಡಭಾಗದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ತೀವ್ರ ಜಖಂಗೊಂಡಿದ್ದು ಪರಿಣಾಮ ಮಗು ಸಾವನ್ನಪ್ಪಿದ್ದು, ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ.

ಘಟನೆ ಬಳಿಕ ಗಂಭೀರ ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love