ಕಾರು ತಪ್ಪಿಸಲು ಹೋಗಿ ವಿದ್ಯಾರ್ಥಿ ಮೇಲೆ ಹರಿದ ಟಿಪ್ಪರ್: ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು

Spread the love

ಕಾರು ತಪ್ಪಿಸಲು ಹೋಗಿ ವಿದ್ಯಾರ್ಥಿ ಮೇಲೆ ಹರಿದ ಟಿಪ್ಪರ್: ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಕುಂದಾಪುರ: ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಹಿಂದಿನಿಂದ ಟಿಪ್ಪರ್ ಢಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನ್ನಪ್ಪಿದ ದಾರುಣ ಘಟನೆ ಕೋಟೇಶ್ವರ-ಹಾಲಾಡಿ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.

ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ (19) ಎಂದು ಗುರುತಿಸಲಾಗಿದೆ.

ಧನುಷ್‌ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ ಇಂಟ‌ರ್ ಲಾಕ್ ಮೇಲೆ ನಡೆದುಕೊಂಡು ಬರುತ್ತಿದ್ದಾಗ ಅತೀ ವೇಗವಾಗಿ ಹಿಂದಿನಿಂದ ಬಂದ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಕಾರನ್ನು ತಪ್ಪಿಸಲು ತೀರಾ ಬಲಬದಿಗೆ ಬಂದು ವಿದ್ಯಾರ್ಥಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಧನುಷ್ ಲಾರಿಯಡಿಗೆ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಧನುಷ್ ತನ್ನ ತಾಯಿಯೊಂದಿಗೆ ನಾಗೂರಿನಲ್ಲಿ ವಾಸಮಾಡುತ್ತಿದ್ದು, ತಂದೆ ಬಾರ್ಕೂರಿನಲ್ಲಿ ಕೆಲಸ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕುಂದಾಪುರ ಸಂಚಾರ ಪೊಲೀಸರು‌ ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments