
Spread the love
ಕಾರು – ಲಾರಿ ನಡುವೆ ಅಫಘಾತ: ಮಣಿಪಾಲದ ವಿದ್ಯಾರ್ಥಿನಿ ಅಪಾಯದಿಂದ ಪಾರು
ಉಡುಪಿ: ಉಡುಪಿಯ ಸಂತೆಕಟ್ಟೆ ಜಂಕ್ಷನ್ ನಲ್ಲಿ ತಡರಾತ್ರಿ ಅಪಘಾತ ಸಂಭವಿಸಿದ್ದು ಮಣಿಪಾಲದ ವಿದ್ಯಾರ್ಥಿನಿಯೊಬ್ವರು ಗಾಯಗೊಂಡ ಘಟನೆ ಸಂಭವಿಸಿದೆ.
ರಾತ್ರಿ ಸುಮಾರು ಹನ್ನೊಂದು ಗಂಟೆಗೆ ಮಣಿಪಾಲದ ಎಂಐಟಿ ವಿದ್ಯಾರ್ಥಿನಿ ಚಲಾಯಿಸಿಕೊಂಡು ಹೋಗುತ್ಯಿದ್ದ ಕಾರಿಗೆ ಲಾರಿ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿನಿ ತಲೆಗೆ ಪೆಟ್ಟಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ನಡೆದ ತಕ್ಷಣ ಮಲ್ಪೆಯ ಅಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ಸ್ನೇಹಿತರು ವಿದ್ಯಾರ್ಥಿನಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲುಸಿಕೊಂಡಿದ್ದಾರೆ.
Spread the love