ಕಾರ್ಕಳದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಅಧಿಕೃತ ಘೋಷಣೆ ಮಾಡಿದ ಪ್ರಮೋದ್ ಮುತಾಲಿಕ್

Spread the love

ಕಾರ್ಕಳದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಅಧಿಕೃತ ಘೋಷಣೆ ಮಾಡಿದ ಪ್ರಮೋದ್ ಮುತಾಲಿಕ್

ಕಾರ್ಕಳ: ಕಾರ್ಕಳ ಕ್ಷೇತ್ರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಶ್ರೀರಾಮ ಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಕಾರ್ಕಳದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ. ಯಾರು ಏನೇ ಒತ್ತಡ ಹಾಕಿದರೂ ನಾನು ಕಾರ್ಕಳ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುವುದು ನಿಶ್ಚಿತ. ಸಾವಿರಾರು ಕಾರ್ಯಕರ್ತರ ನೋವಿನ ಧ್ವನಿಯಾಗಿ, ಅವರ ಒತ್ತಡದಿಂದ ನಾನು ಸ್ಪರ್ಧೆ ಮಾಡುತ್ತೇನೆ ಎಂದರು.

ನಾನು ಬಿಜೆಪಿ ವಿರೋಧಿಯಲ್ಲ. ನಾನು ಮೋದಿ ಪರವಾಗಿ ಹಿಂದುತ್ವದ ಪರವಾಗಿದ್ದೇನೆ, ಗೆದ್ದ ನಂತರವೂ ನನ್ನ ಬೆಂಬಲ ಬಿಜೆಪಿಗೆ ಇರಲಿದೆ. ನನ್ನ ಸ್ಪರ್ಧೆ ಏನಿದ್ದರೂ ವ್ಯಕ್ತಿಗಳ ವಿರುದ್ಧ, ಭ್ರಷ್ಟರ ವಿರುದ್ದ, ಹಿಂದು ವಿರೋಧಿಗಳ ವಿರುದ್ಧ ಎಂದರು.

ಮುತಾಲಿಕ್ ಸ್ಪರ್ಧೆಯಿಂದ ಕಾಂಗ್ರೆಸ್ ಗೆ ಲಾಭ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಆ ಪ್ರಶ್ನೆಯೇ ಇಲ್ಲ. ನಾನು ಎಂದಿಗೂ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿಕೊಂಡು ಬಂದವ. ಇಲ್ಲಿ ನಾನು ಗೆಲ್ಲಬೇಕು, ಹಿಂದುತ್ವ ಗೆಲ್ಲಬೇಕು ಅಷ್ಟೇ ಎಂದರು.

ಉಡುಪಿ ಜಿಲ್ಲೆಯಲ್ಲಿ ಗೋ ಹತ್ಯೆಯಾಗುವ ನಂಬರ್ ಒಂದು ಜಾಗ ಇದ್ದರೆ ಅದು ಕಾರ್ಕಳ ಎನ್ನುತ್ತಿದ್ದಾರೆ. ಇವರಿಗೆ ಗೋ ಮಾತೆಯ ರಕ್ಷಣೆಗಾಗಿ ಅಧಿಕಾರ ಕೊಟ್ಟರೆ ಗೋಮಮಾತೆ ರಕ್ಷಣೆ ಆಗುತ್ತಿಲ್ಲ ಎಂದು ಸಚಿವ ಸುನೀಲ್ ಕುಮಾರ್ ವಿರುದ್ಧ ಟೀಕೆ ಮಾಡಿದರು.


Spread the love

Leave a Reply

Please enter your comment!
Please enter your name here