
Spread the love
ಕಾರ್ಕಳ: ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಟಿಪ್ಪರ್ – ಇಬ್ಬರಿಗೆ ಗಂಭೀರ ಗಾಯ
ಕಾರ್ಕಳ : ನಿಟ್ಟೆ ಲೆಮಿನಾ ಕ್ರಾಸ್ ಬಳಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಹಿಂಬದಿಯಿಂದ ಬರುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿಯಾಗಿದ್ದು, ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಕಾರ್ಕಳದಿಂದ ಬೆಳ್ಮಣ್ ಕಡೆಗೆ ತೆರಳುತ್ತಿದ್ದ ಬಸ್ಸಿಗೆ ಹಿಂದಿನಿಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ್ದು ಇದರಿಂದ ಬಸ್ಸಿನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Spread the love