ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿಯಾಗಿ ತೇಜಸ್ವಿ ಟಿ ಐ ಅಧಿಕಾರ ಸ್ವೀಕಾರ

Spread the love

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿಯಾಗಿ ತೇಜಸ್ವಿ ಟಿ ಐ ಅಧಿಕಾರ ಸ್ವೀಕಾರ

ಕಾರ್ಕಳ : ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ತೇಜಸ್ವಿ ಟಿ ಐ ಸೋಮವಾರ ಅಧಿಕಾರ ಸ್ವೀಕರಿಸಿದರು. ಇವರು ಈ ಮೊದಲು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮೂಲತಃ ಚಿಕ್ಕಮಗಳೂರಿನವರಾದ ತೇಜಸ್ವಿ ಅವರು ಈ ಹಿಂದೆ ಹೊನ್ನಾವರ, ಬಾಳೆಹೊನ್ನೂರು, ಕೊಪ್ಪ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಸ್ಐ ಆಗಿದ್ದ ನಾಸಿರ್ ಹುಸೇನ್ ಅವರು ಮಂಗಳೂರು ಐಜಿ ಕಚೇರಿಗೆ ವರ್ಗಾವಣೆಗೊಂಡಿದ್ದಾರೆ.


Spread the love