ಕಾರ್ಕಳ : ದ್ವಿಚಕ್ರ ವಾಹನಕ್ಕೆ ಬಸ್ಸು ಡಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು

Spread the love

ಕಾರ್ಕಳ : ದ್ವಿಚಕ್ರ ವಾಹನಕ್ಕೆ ಬಸ್ಸು ಡಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು

ಕಾರ್ಕಳ : ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದ ದ್ವಿಚಕ್ರ ವಾಹನ ಹಾಗೂ ಬಸ್ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.

ಮೃತ ವ್ಯಕ್ತಿಯನ್ನು ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್ (23) ಮೃತರು ಎಂದು ಗುರುತಿಸಲಾಗಿದೆ.

ಕಾರ್ತಿಕ್ ಬೈಲೂರಿನಿಂದ ಹೋಗುತ್ತಿದ್ದಾಗ ಕಾರ್ಕಳದಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಬಸ್ ಢಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಕಾರ್ತಿಕ್ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತ ಕಾರ್ತಿಕ್ ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ. ಮೃತದೇಹವನ್ನು ಕಾರ್ಕಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love