
Spread the love
ಕಾರ್ಕಳ: ನಿಂತಿದ್ದ ಬಸ್ಸಿಗೆ ಬೈಕ್ ಡಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು
ಕಾರ್ಕಳ: ನಿಂತಿದ್ದ ಬಸ್ಸಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರ್ಗಾನ ಗೊರೆಟ್ಟಿ ಚರ್ಚ್ ಸಮೀಪದ ಅಮ್ಮಾಸ್ ಡಾಬಾ ಬಳಿ ಬುಧವಾರ ಸಂಜೆ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಬೈಕ್ ಸವಾರ ಹಿರ್ಗಾನ ಕಾನಂಗಿ ಹಂಕರಬೆಟ್ಟು ನಿವಾಸಿ ಮನೋಹರ ಪೂಜಾರಿ (43) ಎಂದು ಗುರುತಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ ಮನೋಹರ ಪೂಜಾರಿ ಅವರು ತನ್ನ ಬೈಕಿನಲ್ಲಿ ಕಾರ್ಕಳ ಕಡೆಯಿಂದ ಹಿರ್ಗಾನಕ್ಕೆ ಹೋಗುತ್ತಿದ್ದ ವೇಳೆ ಅಜೆಕಾರು ಕಡೆಗೆ ಸಾಗುತ್ತಿದ್ದ ಬಸ್ಸು ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ನಿಂತಿದ್ದ ವೇಳೆ ಹಿಂದಿನಿಂದ ಬೈಕ್ ಡಿಕ್ಕಿಹೊಡೆದ ಪರಿಣಾಮ ಮನೋಹರ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Spread the love