Home Mangalorean News Kannada News ಕಾರ್ಕಳ: ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರ್ ನಿಧನ

ಕಾರ್ಕಳ: ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರ್ ನಿಧನ

Spread the love

ಕಾರ್ಕಳ: ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರ್ ನಿಧನ

ಕಾರ್ಕಳ: ಸಾಹಿತಿ, ಲೇಖಕ ಶೇಖರ್ ಅಜೆಕಾರ್ ಹೃದಯಘಾತದಿಂದ ಆ.31ರ ಮಂಗಳವಾರ ಬೆಳಗ್ಗೆ ನಿಧನ ಹೊಂದಿದರು.

ಶೇಖರ್ ಅಜೆಕಾರ್ ಅವರು 22 ಪುಸ್ತಕಗಳನ್ನು ಬರೆದಿದ್ದಾರೆ. ಮಕ್ಕಳ ಸಾಹಿತ್ಯ ಸಮ್ಮೇಳನಗಳನ್ನು ಸಂಘಟಿಸಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುತಿದ್ದರು.

ಶೇಖರ್ ಅವರು ಕುಂದಪ್ರಭ ವಾರಪತ್ರಿಕೆಯಲ್ಲಿ ಬರಹಗಾರರಾಗಿ ತಮ್ಮ ಪ್ರಯಾಣ ಪ್ರಾರಂಭಿಸಿದರು. ಮುಂಬೈನ ‘ಕರ್ನಾಟಕ ಮಲ್ಲ, ಜನವಾಹಿನಿ, ಕನ್ನಡಪ್ರಭ ಮತ್ತು ಉಷಾ ಕಿರಣಗಳಲ್ಲೂ ಸೇವೆ ಸಲ್ಲಿಸಿದ್ದಾರೆ.

10 ವರ್ಷಗಳ ಕಾಲ ಪತ್ರಕರ್ತರ ವೇದಿಕೆ ಬೆಂಗಳೂರಿನ ಉಡುಪಿ ಶಾಖೆಯ ಉಪಾಧ್ಯಕ್ಷರೂ ಆಗಿದ್ದರು.

ಇವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಷ್ಟ್ರೀಯ ಬಸವಶ್ರೀ ಅವಾರ್ಡ್ 2018, ಅಮಂತ್ರನ ಪ್ರಶಸ್ತಿ 2019, ಕೃಷಿ ಬಂಧು 2019, ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪ್ರಶಸ್ತಿ 2019, ವಿಶ್ವ ದರ್ಶನ ಸಾಹಿತ್ಯ ಪ್ರಶಸ್ತಿ 2019, ಶಿಖಾ ಭಾರತ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಗಾಗಿ 1995 ರಲ್ಲಿ ಪ್ರಶಸ್ತಿ ಲಭಿಸಿದೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ: ವಿವಿಧ ಪತ್ರಿಕೆಗಳಲ್ಲಿ ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತ ಶೇಖರ್ ಅಜೆಕಾರ್ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ರಜತ ಮಹೋತ್ಸವ ಸಮಿತಿಯ ಸಂಚಾಲಕ ಶರೀಫ್ ಕಾರ್ಕಳ, ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ


Spread the love

Exit mobile version