Spread the love
ಕಾರ್ಕಳ: ಹೊಟೇಲ್ ಉದ್ಯಮಿ ವಿಷ ಸೇವಿಸಿ ಆತ್ಮಹತ್ಯೆ
ಉಡುಪಿ: ಹೊಟೇಲ್ ಉದ್ಯಮಿ ಮೂಲತಃ ಕಾರ್ಕಳ ಬೈಲೂರಿನ ಕೃಷ್ಣರಾಜ್ ಹೆಗ್ಡೆ(45) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಆತ್ರಾಡಿ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇವರ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.
ಉಡುಪಿ ಹಾಗೂ ಮಣಿಪಾಲದಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಇವರು ಪತ್ನಿ, ಪುತ್ರನನ್ನು ಅಗಲಿದ್ದಾರೆ.
ಬೈಲೂರು – ಕೌಡೂರು ಮಾರಿಯಮ್ಮ ದೇವಸ್ಥಾನದ ನಾಯರ್ಬೆಟ್ಟು ಧಾರ್ಮಿಕ ಸೇವಾ ಸಮಿತಿಯ ಕಾರ್ಯದರ್ಶಿಯಾಗಿದ್ದ ಕೃಷ್ಣರಾಜ ಹೆಗ್ಡೆ ಅವರು ಉಡುಪಿ ಮಣಿಪಾಲದಲ್ಲಿ ಹೊಟೇಲ್ ಉದ್ಯಮ ನಡೆಸಿಕೊಂಡಿದ್ದು, ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು
Spread the love