ಕಾರ್ಮಿಕರ ಹಿತರಕ್ಷಣೆಗೆ ಬಿಜೆಪಿ ಸರಕಾರ ಬದ್ಧ: ಯಶ್ಪಾಲ್ ಸುವರ್ಣ

Spread the love

ಕಾರ್ಮಿಕರ ಹಿತರಕ್ಷಣೆಗೆ ಬಿಜೆಪಿ ಸರಕಾರ ಬದ್ಧ: ಯಶ್ಪಾಲ್ ಸುವರ್ಣ

ಉಡುಪಿ: ಕಾರ್ಮಿಕ ವರ್ಗದ ಶ್ರಮದ ಫಲವಾಗಿ ಇಂದು ಬೃಹತ್ ಕೈಗಾರಿಕೆಗಳು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ ದೇಶದ ಆರ್ಥಿಕತೆಗೆ ಶಕ್ತಿ ತುಂಬುತ್ತಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಕಾರ್ಮಿಕರ ಏಳಿಗೆಗಾಗಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಕಾರ್ಮಿಕ ವರ್ಗದ ಹಿತರಕ್ಷಣೆಗೆ ಬಿಜೆಪಿ ಸರ್ಕಾರ ಬದ್ಧತೆ ಮೆರೆದಿದೆ.

ಉಡುಪಿ ಕ್ಷೇತ್ರದಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಪ್ರೋತ್ಸಾಹ ನೀಡಿ ಉದ್ಯೋಗ ಸೃಷ್ಟಿಸುವುದಾಗಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಹೇಳಿದರು.

ಮಣಿಪಾಲ ಭಾಗದ ವಿವಿಧ ಗಾರ್ಮೆಂಟ್ಸ್ ಹಾಗೂ ಕೈಗಾರಿಕಾ ಘಟಕಗಳಿಗೆ ಶಾಸಕ ರಘುಪತಿ ಭಟ್ ರವರೊಂದಿಗೆ ಭೇಟಿ ನೀಡಿ ಕಾರ್ಮಿಕರಲ್ಲಿ ಮತ ಯಾಚನೆ ಮಾಡಿದರು.

ಶಾಸಕ ರಘುಪತಿ ಭಟ್ ಮಾತನಾಡಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ರನ್ನು ಗೆಲ್ಲಿಸಿ ಬಿಜೆಪಿ ಸರ್ಕಾರದ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಕೈ ಕೊಡಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯರಾದ ಮಂಜುನಾಥ್‌ ಮಣಿಪಾಲ್‌ ,ಕಲ್ಪನಾ‌ ಸುಧಾಮ, ಮಾಜಿ ನಗರಸಭಾ ಸದಸ್ಯ ನರಸಿಂಹ ನಾಯಕ್ ,ಡಾ ಬಾಲಕೃಷ್ಣ ಮದ್ದೋಡಿ, ಸತೀಶ್ ಸಾಲ್ಯಾನ್ ,ಆಲ್ವಿನ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.


Spread the love

Leave a Reply

Please enter your comment!
Please enter your name here