
Spread the love
ಕಾಲುವೆಯಲ್ಲಿ ಮುಳುಗಿ ಇಬ್ಬರು ಬಾಲಕಿಯರ ಸಹಿತ ಮೂವರ ಮೃತ್ಯು
ಚಿಕ್ಕಮಗಳೂರು: ಕಾಲುವೆಯಲ್ಲಿ ಮುಳುಗಿ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕಿಯರು ಸೇರಿದಂತೆ ಮೂವರ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ನಡೆದಿದೆ.
ಮೃತರನ್ನು ರವಿ (31), ಅನನ್ಯ (17), ಶಾಮವೇಣಿ (16) ಎಂದು ಗುರುತಿಸಲಾಗಿದೆ. ರವಿ ಮೂಲತಃ ಲಕ್ಕವಳ್ಳಿ ನಿವಾಸಿ, ಅನನ್ಯ, ಶಾಮವೇಣಿ ರವಿಯ ಸಹೋದರಿಯರ ಮಕ್ಕಳು.ಅನನ್ಯ ಮೂಲತಃ ಶಿವಮೊಗ್ಗ ಹಾಗೂ ಶಾಮವೇಣಿ ನಂಜನಗೂಡಿನವಳು.
ನೀರಿನಲ್ಲಿ ಆಟವಾಡುವಾಗ ಆಯಾ ತಪ್ಪಿ ಬಿದ್ದುಈ ಮೂವರು ಮೃತರಾಗಿದ್ದು, ಒಬ್ಬರ ರಕ್ಷಣೆಗೆ ಮತ್ತೊಬ್ಬರು ಹೋಗಿ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸಂಬಂಧಿಕರ ಮನೆ ಲಕ್ಕವಳ್ಳಿಗೆ ಬಂದಾಗ ದುರ್ಘಟನೆ ನಡೆದಿದೆ.ರವಿ ಮೃತದೇಹ ಪತ್ತೆ, ಮತ್ತಿಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ.
ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Spread the love