ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ – ಕಮ್ಯುನಿಸ್ಟ್ ಪಕ್ಷ ಖಂಡನೆ

ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ – ಕಮ್ಯುನಿಸ್ಟ್ ಪಕ್ಷ ಖಂಡನೆ

ಮಂಗಳೂರು: ಪುತ್ತೂರು ನಗರದಲ್ಲಿ ಕೆಲವು ಯುವಕರು ಹುಡುಗಿಯೊಬ್ಬಳನ್ನು ಅಪಹರಿಸಿ, ಮತ್ತು ಬರಿಸಿ, ಅವಳ ಮೇಲೆ ಅತ್ಯಾಚಾರ ಎಸಗಿ, ಅದನ್ನು ವೀಡಿಯೋ ಮಾಡಿರುವರು ಎಂದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಈ ಕುಕೃತ್ಯ ಅತ್ಯಂತ ಭೀಕರವಾಗಿದ್ದು ಇಂದಿನ ಯುವಕರ ಮಾನಸಿಕ ಪರಿಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ. ಸಂಘಪರಿವಾರದ ಯುವಕರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದೂ ವರದಿಯಾಗಿದೆ.

ಭಾರತ ಕಮ್ಯುನಿಸ್ಟ್ ಪಕ್ಷದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಮಿತಿ ಈ ಕುಕೃತ್ಯವನ್ನು ತೀವ್ರವಾಗಿ ಖಂಡಿಸುತ್ತದೆ. ಯಾವುದೇ ಒತ್ತಡಕ್ಕೆ ಮಣಿಯದೆ, ಪೋಲೀಸ್ ಇಲಾಖೆ ಈ ಬಗ್ಗೆ ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಂಡು ತಪ್ಪಿತಸ್ತರಿಗೆ ಸೂಕ್ತ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಸರಕಾರವನ್ನು ಒತ್ತಾಯಿಸುತ್ತದೆ.