ಕಿನ್ನಿಗೋಳಿಯಲ್ಲಿ ಕಾರು ಅಪಘಾತ: ಮಹಿಳೆ ಸಹಿತ ಐವರಿಗೆ ಗಾಯ

Spread the love

ಕಿನ್ನಿಗೋಳಿಯಲ್ಲಿ ಕಾರು ಅಪಘಾತ: ಮಹಿಳೆ ಸಹಿತ ಐವರಿಗೆ ಗಾಯ
 

ಮಂಗಳೂರು: ಪಾದಾಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ಮಹಿಳೆಯನ್ನು ಪಕ್ಷಿಕೆರೆ ಕೆಮ್ರಾಲ್ ನಿವಾಸಿ ಜಯಂತಿ ಶೆಟ್ಟಿ (50) ಎಂದು ಗುರುತಿಸಲಾಗಿದೆ. ಉಳಿದಂತೆ ಕಾರಿನಲ್ಲಿದ್ದ ಚಾಲಕ ತೋಡಾರ್ ಗಳಾದ ನಿವಾಸಿ ಚಾಲಕ ಕೆ ಹೆಚ್ ಅಬ್ದುಲ್ ಖಾದರ್ (65), ರಿದಾ (16), ರಶ್ಮಿ (18), ಕೌಸರ್ (46), ಎಂದು ಗುರುತಿಸಲಾಗಿದ್ದು, ಕಿನ್ನಿಗೊಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಿನ್ನಿಗೋಳಿ ಚರ್ಚ್ ಕಡೆಯಿಂದ ಮಹಿಳೆಯೋರ್ವರು ತರಕಾರಿ ಹಿಡಿದುಕೊಂಡು ನಡೆದುಕೊಂಡು ಬರುತ್ತಿದ್ದ ಸಂದರ್ಭ ಕಿನ್ನಿಗೋಳಿ ಕಡೆಯಿಂದ ಮೂರು ಕಾವೇರಿ ಕಡೆಗೆ ಸಂಚರಿಸುತ್ತಿದ್ದ ಬ್ರೀಜಾ ಕಾರು ಮಹಿಳೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಅನತಿ ದೂರಕ್ಕೆ ಉರುಳಿದ್ದು, ಮಹಿಳೆ ಗಂಭೀರ ಗಾಯಗೊಂಡಿದ್ದಾರೆ.

ಕಾರಿನಲ್ಲಿ ಒಟ್ಟು ನಾಲ್ಕು ಮಂದಿ ಇದ್ದು, ಕಾರಿನಲ್ಲಿದ್ದವರು ಕೂಡಾ ಗಾಯಗೊಂಡಿದ್ದಾರೆ. ಪಾದಚಾರಿ ಮಹಿಳೆ ಕೆಮ್ರಾಲ್ ಮನೋಲಿ ಬಲ್ಲೆ ನಿವಾಸಿ ಜಯಂತಿ ಶೆಟ್ಟಿ ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸ್ಥಳೀಯ ಅಂಗಡಿ ಮಾಲಿಕರಾದ ಅಲ್ವಿನ್, ಸ್ಯಾನೀ ಪಿಂಟೋ, ಶೈಲಾ ಸಿಕ್ವೇರಾ ಸಹಕರಿಸಿದ್ದಾರೆ.

ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾರಿನ ಚಾಲಕನ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

Leave a Reply

Please enter your comment!
Please enter your name here