ಕುಂದಾಪುರ: ಅಕ್ರಮ ಕಸಾಯಿಖಾನೆಗೆ ದಾಳಿ – 23 ದನಗಳ ರಕ್ಷಣೆ

Spread the love

ಕುಂದಾಪುರ: ಅಕ್ರಮ ಕಸಾಯಿಖಾನೆಗೆ ದಾಳಿ – 23 ದನಗಳ ರಕ್ಷಣೆ

ಕುಂದಾಪುರ: ಅಕ್ರಮ ಕಸಾಯಿಖಾನೆಗೆ ದಾಳಿ ಮಾಡಿ ಮಾಂಸಕ್ಕಾಗಿ ಕೂಡಿಟ್ಟಿದ್ದ 23 ದನಗಳನ್ನು ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು ರಕ್ಷಣೆ ಮಾಡಿದ ಘಟನೆ ಗುಳ್ವಾಡಿ ಎಂಬಲ್ಲಿ ಭಾನುವಾರ ನಡೆದಿದೆ.

ಕುಂದಾಪುರ ತಾಲೂಕಲ್ಲಿ ಆಗಾಗ್ಗೆ ದನಗಳು ಕಳವಾಗುತ್ತಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಮತ್ತು ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರ ನೆರವಿನೊಂದಿಗೆ ಗುಳ್ವಾಡಿ ಅಬೂಬಕ್ಕರ್ ಎಂಬವರ ಮನೆಗೆ ದಾಳಿ ಮಾಡಿದ ವೇಳೆ ಮನೆಯಲ್ಲಿ ಮಾಂಸಕ್ಕಾಗಿ ದನಗಳನ್ನು ಕೂಡಿ ಹಾಕಿರುವುದು ಕಂಡುಬಂದಿದ್ದು, ಪೊಲೀಸರು ಅವುಗಳನ್ನು ರಕ್ಷಿಸಿದ್ದಾರೆ. ದಾಳಿಯ ವೇಳೆ ಆರೋಪಿ ಅಬೂಬಕ್ಕರ್ ಸ್ಥಳದಿಂದ ಪರಾರಿಯಾಗಿದ್ದಾರೆ.

ಈ ಕುರಿತು ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love