ಕುಂದಾಪುರ: ಇಬ್ಬರು ಅಂತರ್ ರಾಜ್ಯ ಮನೆ ಕಳವು ಆರೋಪಿಗಳ ಬಂಧನ – 16 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

Spread the love

ಕುಂದಾಪುರ: ಇಬ್ಬರು ಅಂತರ್ ರಾಜ್ಯ ಮನೆ ಕಳವು ಆರೋಪಿಗಳ ಬಂಧನ – 16 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

ಕುಂದಾಪುರ: ಕೋಟೇಶ್ವರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕಾಸರಗೋಡು ಹೊಸದುರ್ಗಿ ಪೆರಿಯಾಟಡುಕಂ ನಿವಾಸಿ ಹಾಸಿಮ್ ಎ ಎಚ್ (42) ಮತ್ತು ಕುಂಬಳೆ ಮಂಜೇಶ್ವರ ನಿವಾಸಿ ಅಬೂಬಕ್ಕರ್ ಸಿದ್ದೀಕ್ (48) ಎಂದು ಗುರುತಿಸಲಾಗಿದೆ.
2022 ಸಪ್ಟೆಂಬರ್ 17 ರಂದು ರಾತ್ರಿ ವೇಳೆಯಲ್ಲಿ ಕುಂದಾಪುರ ತಾಲೂಕು ಕೋಟೆಶ್ವರ ಗ್ರಾಮದ ಕಾಮತ್ ಪೆಟ್ರೋಲ್ ಹಂಪ್ ಎದುರಿನ ಬೊಬ್ಬರ್ಯ ದೇವಸ್ಥಾನ ಬಳಿ ಇರುವ ಪ್ರಸನ್ನ ನಾರಾಯಣ ಆಚಾರ್ಯ(47) ರವರ ಮನೆಯ ಎದುರಿನ ಬಾಗಿಲಿನ ಬೀಗವನ್ನು ಮುರಿದು, ಚಿನ್ನಾಭರಣಗಳನ್ನು ಹಾಗೂ ನಗದು ಹಣವು ಕಳವಾದ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ಪತ್ತ ಬಗ್ಗೆ – ಕುಂದಾಪುರ ವೃತ್ತ ನಿರೀಕ್ಷಕರ ನೇತ್ರತ್ವದಲ್ಲಿ ಕುಂದಾಪುರ ಪೊಲೀಸ್ ಠಾಣೆಯ ಪಿ.ಎಸ್.ಐ. ಸದಾಶಿವ ಗವರೋಜಿ ಮತ್ತು ಪಿಎಸ್‌ಐ ಪ್ರಸಾದ್ ಕಲಹಾಳ ನೇತ್ರತ್ವದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಯವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಿದ್ದು ವಿಶೇಷ ಕರ್ತವ್ಯದಲ್ಲಿದ್ದ ತಂಡವು ಹಾಶೀಮ್ ವಿ ಎಚ್ ಮತ್ತು ಅಬೂಬಕ್ಕರ್ ಸಿದ್ದೀಕ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿಲಾಗಿದೆ.

ಈ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡ ತನಿಖಾಧಿಕಾರಿ ಗೋಪಿಕೃಷ್ಣ ಕೆ ಆರ್ ಸಿಪಿಐ ಕುಂದಾಪುರ ರವರು ಹೆಚ್ಚಿನ ತನಿಖೆ ನಡೆಸಿದ್ದು ತನಿಖೆ ಸಮಯ ಆಪಾದಿತರು ಜಿಲ್ಲೆಯ ಉಡುಪಿನಗರ ಪೊಲೀಸ್ ಠಾಣೆ, ಮಲ್ಪೆ ಪೊಲೀಸ್ ಠಾಣೆ, ಕುಂದಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆಸಿ ಕಳವು ಮಾಡಿದ್ದಾಗಿ ತಿಳಿಸಿ ಚಿನ್ನಾಭರಣಗಳನ್ನು ಕೇರಳ ಮಂಜೇಶ್ವರ ತಾಲೂಕಿನ ನೀರ್ಚಾಲ್ ಕಾಳಿಕಾಂಬ ಜುವೆಲ್ಸರ್ಸ್ ನಲ್ಲಿ ಮಾರಾಟ ಮಾಡಿದ್ದ ಅಂಗಡಿಯನ್ನು ತೋರಿಸಿಕೊಟ್ಟ ಮೇರೆಗೆ ಸದ್ರಿ ಜುವೆಲ್ಲರಿ ಅಂಗಡಿಯವನು ಹಾಜರುಪಡಿಸಿದ 15 ಲಕ್ಷ ಮೌಲ್ಯದ ಒಟ್ಟು 300 ಗ್ರಾಂ ಚಿನ್ನ ಹಾಗೂ 1 ಲಕ್ಷ ಮೌಲ್ಯದ ಒಟ್ಟು 1481 ಗ್ರಾಂ ಬೆಳ್ಳಿ ಸೇರಿ ಒಟ್ಟು ಮೌಲ್ಯ 16 ಲಕ್ಷದ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿರುತ್ತದೆ,

ಆರೋಪಿಗಳು ಅಂತರ್‌ರಾಜ್ಯ ವೃತ್ತಿ ಪರ ಚೋರರಾಗಿದ್ದು ಅವರುಗಳು ಈಗಾಗಲೇ ಕೇರಳ ರಾಜ್ಯದ ವಿವಿಧೆಡೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡಾ ಕಳ್ಳತನ ಹಾಗೂ ಇತರ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಅನುಭವಿಸಿರುವುದು. ತನಿಖೆ ಸಮಯ ತಿಳಿದುಬಂದಿರುತ್ತದೆ.

ಈ ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಕ್ಷಯ ಎಂ. ಹೆಚ್. ಐ.ಪಿ.ಎಸ್.ರವರ ನಿರ್ದೇಶನದಲ್ಲಿ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ.ಸಿದ್ದಲಿಂಗಪ್ಪರವರ ನಿರ್ದೇಶನದಂತೆ ಪೊಲೀಸ್ ಉಪಾಧೀಕ್ಷಕರಾದ ಬೆಳ್ಳಿಯಪ್ಪ ಕೆ,ಯು, ಕುಂದಾಪುರ ಉಪವಿಭಾಗ ರವರ ಮಾರ್ಗದರ್ಶನದಲ್ಲಿ, ಕುಂದಾಪುರ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ಕೆ.ಆರ್ ರವರ ನೇತ್ರತ್ವದಲ್ಲಿ, ಕುಂದಾಪುರ ಪೊಲೀಸ್ ಠಾಣೆಯ ಪಿ.ಎಸ್.ಐ. ರವರರಾದ ಸದಾಶಿವ ಗವರೋಜಿ, ಪ್ರಸಾದ್ ಕುಮಾರ್ ಕ, ಮತ್ತು ಎ.ಎಸ್.ಐ, ಸುದಾಕರ ಹಾಗೂ ಸಿಬ್ಬಂದಿಯವರಾದ ಸಂತೋಷ ಕುಮಾರ್, ಕ.ಯು ಸಂತೋಷ ಕುಮಾರ್, ರಾಮ ಪೂಜಾರಿ, ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ತಾಂತ್ರಿಕ ವಿಭಾಗ ದ ದಿನೇಶ್ ಇವರನ್ನೊಳಗೊಂಡ ತಂಡವು ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಸಹಕರಿಸಿರುತ್ತಾರೆ.


Spread the love

Leave a Reply

Please enter your comment!
Please enter your name here