ಕುಂದಾಪುರ: ಕೆಟ್ಟು ನಿಂತಿದ್ದ ಟಿಪ್ಪರ್ ಗೆ ದ್ವಿಚಕ್ರ ವಾಹನ ಢಿಕ್ಕಿ: ಸವಾರ ಮೃತ್ಯು, ಸಹಸವಾರ ಗಂಭೀರ

Spread the love

ಕುಂದಾಪುರ: ಕೆಟ್ಟು ನಿಂತಿದ್ದ ಟಿಪ್ಪರ್ ಗೆ ದ್ವಿಚಕ್ರ ವಾಹನ ಢಿಕ್ಕಿ: ಸವಾರ ಮೃತ್ಯು, ಸಹಸವಾರ ಗಂಭೀರ
 

ಕುಂದಾಪುರ: ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಟಿಪ್ಪರ್ ವಾಹನಕ್ಕೆ ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿನ ತಲ್ಲೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರವಿವಾರ ತಡರಾತ್ರಿ ನಡೆದಿರುವುದು ವರದಿಯಾಗಿದೆ.

ಬೈಂದೂರು ತಾಲೂಕಿನ ಕಂಬದಕೋಣೆ ಹಳಗೇರಿ ತೆಂಕಬೆಟ್ಟಿನ ನಿವಾಸಿ ಸತೀಶ್ ಜೋಗಿ(42) ಮೃತಪಟ್ಟವರು.

ಮೃತರ ಸಂಬಂಧಿ ಸಹ ಸವಾರ ಆಕಾಶ್ ಜೋಗಿ (17) ಗಂಭೀರ ಗಾಯಗೊಂಡಿದ್ದು, ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love