
Spread the love
ಕುಂದಾಪುರ: ದಾಖಲೆಗಳಿಲ್ಲದೆ ಬೈಕಿನಲ್ಲಿ ಸಾಗಿಸುತ್ತಿದ್ದ 13 ಲಕ್ಷ ರೂ ಹಣ ವಶ
ಕುಂದಾಪುರ: ಕುಂದಾಪುರ: ದ್ವಿಚಕ್ರ ವಾಹನದಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಹಣವನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದ ಘಟನೆ ಬುಧವಾರ ನಗರದ ಸಂಗಮ್ ಜಂಕ್ಷನ್ ಬಳಿಯ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.
ಮೂಲತಃ ಮಹಾರಾಷ್ಟ್ರದ, ಪ್ರಸ್ತುತ ಕೋಟೇಶ್ವರ ಸಮೀಪದ ವಾಸಿಯಾಗಿರುವ ದಿಲೀಪ್ ಗೋಡ್ಸೆ (47) ತನ್ನ ಬೈಕಿನಲ್ಲಿ ಯಾವುದೇ ದಾಖಲೆಗಳಿಲ್ಲದೆ 13 ಲಕ್ಷ ಸಾಗಿಸುತ್ತಿದ್ದ. ಕುಂದಾಪುರ ಸಂಗಮ್ ಜಂಕ್ಷನ್ ಬಳಿ ಪೊಲೀಸ್ ಚೆಕ್ ಪೊಸ್ಟ್ ಬಳಿ ಪೊಲೀಸರು ವಾಹನ ತಪಾಸಣೆಯಲ್ಲಿ ತೊಡಗಿದ್ದಾಗ ಬೈಕ್ ಅಡ್ಡಗಟ್ಟಿ ಪರಿಶೀಲಿಸಿದಾಗ ಹಣ ಇರುವುದು ಬೆಳಕಿಗೆ ಬಂದಿದೆ.
ವಿಚಾರಣೆ ವೇಳೆ ಈ ಹಣಕ್ಕೆ ಯಾವುದೇ ದಾಖಲೆಗಳಿಲ್ಲ ಎಂದು ತಿಳಿದುಬಂದಿದ್ದು ವಶಕ್ಕೆ ಪಡೆದ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.
ಕುಂದಾಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Spread the love