ಕುಂದಾಪುರ: ದೇವಸ್ಥಾನದ ಕೆರೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

Spread the love

ಕುಂದಾಪುರ: ದೇವಸ್ಥಾನದ ಕೆರೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ: ಕಾಳಾವರ ದೇವಸ್ಥಾನದ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೋರ್ವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಕೋಟೇಶ್ವರದಲ್ಲಿ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಕಾಳಾವರ ನರಿಕೊಡ್ಲು ಮನೆ ನಿವಾಸಿ ಹರೀಶ್ ಪೂಜಾರಿ (37) ಎಂದು ಗುರುತಿಸಲಾಗಿದೆ.

ಪೊಲೀಸ್ ಮಾಹಿತಿ ಪ್ರಕಾರ ಭಾನುವಾರ ಮೀನು ಶಿಕಾರಿಗಾಗಿ ಹರೀಶ್ ಪೂಜಾರಿ ಮತ್ತು ಆತನ ಮೂವರ ಸ್ನೇಹಿರತು ಕಾಳಾವರ ದೇವಸ್ಥಾನದ ಸಮೀಪದ ಕೆರೆಗೆ ಮೀನು ಹಿಡಿಯಲು ತೆರಳಿದ್ದು, ಹರೀಶ್ ಪೂಜಾರಿ ಮೀನು ಹಿಡಿಯಲು ನೀರಿಗಿಳಿದು ಈಜಲು ಆರಂಭಿಸಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಮುಳುಗಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳೀಯ ಈಜುಗಾರರು, ಅಗ್ನಿಶಾಮಕ ದಳ, ಹಾಗೂ ಈಶ್ವರ ಮಲ್ಪೆ ಸೇರಿದಂತೆ ಹಲವರು ಸೇರಿ ಹುಡುಕಾಟ ನಡೆಸಿದ್ದು ಸೋಮವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ.

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love