ಕುಂದಾಪುರ: ಪರವಾನಗಿ ರಹಿತವಾಗಿ ಮರಳು ಸಾಗಾಟ: ಎರಡು ಟಿಪ್ಪರ್ ವಶಕ್ಕೆ

Spread the love

ಕುಂದಾಪುರ: ಪರವಾನಗಿ ರಹಿತವಾಗಿ ಮರಳು ಸಾಗಾಟ: ಎರಡು ಟಿಪ್ಪರ್ ವಶಕ್ಕೆ

ಕುಂದಾಪುರ: ತ್ರಾಸಿ ಗ್ರಾಮದಲ್ಲಿ ಪರವಾನಿಗೆ ರಹಿತವಾಗಿ ಮರಳು ಸಾಗಾಣಿಕೆ ನಡೆಸುತ್ತಿದ್ದ 2 ಟಿಪ್ಪರ್ ಲಾರಿಗಳನ್ನು ಮರಳು ಸಹಿತವಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಸೋಮವಾರ ವಶಕ್ಕೆ ಪಡೆದಿದ್ದಾರೆ.

ಕುಂದಾಪುರ ತಾಲೂಕು ತ್ರಾಸಿ ಗ್ರಾಮದ ಮೊವಾಡಿ ಪರಿಸರದಲ್ಲಿ ಪರವಾನಿಗೆ ರಹಿತವಾಗಿ ಮರಳು ಸಾಗಾಟ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸ್ವೀಕೃತವಾದ ದೂರಿನ ಮೇರೆಗೆ ಇಲಾಖೆ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ. ಯು ಅವರ ಮಾರ್ಗದರ್ಶನದಲ್ಲಿ ಸೋಮವಾರ ಮದ್ಯಾಹ್ನ 12.30ರ ಸಮಯದಲ್ಲಿ ಭೂ ವಿಜ್ಞಾನಿ ಸಂಧ್ಯಾ ಅವರು ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದ ಮೋವಾಡಿ ಪರಿಸರದಲ್ಲಿ ಕಾರ್ಯಚಾರಣೆ ನಡೆಸಿ ಪರವಾನಿಗೆ ರಹಿತವಾಗಿ ಮರಳು ಸಾಗಾಣಿಕೆ ನಡೆಸುತ್ತಿದ್ದ ಮರಳು ಸಹಿತ 2 ಟಿಪ್ಪರ್ ಲಾರಿ ವಶಕ್ಕೆ ಪಡೆದುಕೊಳ್ಳಲಾಗಿದೆ.

ಭೂವಿಜ್ಞಾನಿ ಅವರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ ಅನಧಿಕೃತ ಮರಳು ಸಾಗಾಣಿಕೆಗೆ ಬಳಸುತ್ತಿದ್ದ ಲಾರಿಗಳನ್ನು ಗಂಗೊಳ್ಳಿ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಇರಿಸಲಾಗಿದೆ‌.


Spread the love