ಕುಂದಾಪುರ: ರಾ.ಹೆ.66 ಅವೈಜ್ಞಾನಿಕ ಚರಂಡಿ ಕಾಮಗಾರಿ- ಸಹಾಯಕ ಕಮೀಷನರ್ ಪರಿಶೀಲನೆ

Spread the love

ಕುಂದಾಪುರ: ರಾ.ಹೆ.66 ಅವೈಜ್ಞಾನಿಕ ಚರಂಡಿ ಕಾಮಗಾರಿ- ಸಹಾಯಕ ಕಮೀಷನರ್ ಪರಿಶೀಲನೆ

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ-66 ಚತುಷ್ಪತ ಕಾಮಗಾರಿಯ ವೇಳೆ ನಡೆಸಲಾದ ಅವೈಜ್ಙಾನಿಕ ಚರಂಡಿ ಅವ್ಯವಸ್ಥೆಯಿಂದಾಗಿ ಹೆದ್ದಾರಿಗೆ ತಾಗಿಕೊಂಡಿರುವ ಮನೆಗಳಿಗೆ ನೀರು ನುಗ್ಗುತ್ತಿರುವ ಹಿನ್ನೆಲೆ ಸಾರ್ವಜನಿಕ ದೂರಿನ ಮೇರೆಗೆ ಕುಂದಾಪುರ ಸಹಾಯಕ ಆಯುಕ್ತ ಕೆ.ರಾಜು ಭೇಟಿ ನೀಡಿ ಸಮೀಪದ ನಿವಾಸಿಗಳಿಗೆ ತೊಂದರೆಯಾಗದAತೆ ಕ್ರಮ ಕೈಗೊಳ್ಳಲು ಹೆದ್ದಾರಿ ಗುತ್ತಿಗೆ ಕಂಪೆನಿಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಗುರುವಾರ ಕುಂದಾಪುರದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಕುಂದಾಪುರ ಹಾಗೂ ಬೈಂದೂರು ಹೆದ್ದಾರಿ ಗುತ್ತಿಗೆ ವಹಿಸಿಕೊಂಡ ಐಆರ್‌ಬಿ ಹಾಗೂ ನವಯುಗ ಕಂಪೆನಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯ 66 ಕ್ಕೆ ಹೊಂದಿಕೊAಡಿರುವ ನೀರು ಹಾದು ಹೋಗುವ ಚರಂಡಿ ಹಾಗೂ ತಗ್ಗು ಪ್ರದೇಶಗಳ ಪರಿಶೀಲನೆ ನಡೆಸಿದರು.

ಈ ವೇಳೆ ಗುತ್ತಿಗೆ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದ ಅವರು ಹೆದ್ದಾರಿಗೆ ಹೊಂದಿಕೊAಡಿರುವ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಕಲ್ಪಿಸಬೇಕು. ಹೆದ್ದಾರಿ ಕಾಮಗಾರಿಯಿಂದಾಗಿ ಶೇಖರಣೆಯಾಗುವ ಮಳೆಗಾಲದ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಹೆದ್ದಾರಿಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದAತೆ ಎಚ್ಚರಿಕೆ ವಹಿಸಬೇಕು. ಹೆದ್ದಾರಿಯ ತಗ್ಗು ಪ್ರದೇಶಗಳಲ್ಲಿ ತುಂಬಿದ ನೀರು ಆಸು-ಪಾಸಿನ ಜನವಸತಿ ಹಾಗೂ ಕೃಷಿ ಪ್ರದೇಶಗಳಿಗೆ ನುಗ್ಗದಂತೆ ರಕ್ಷಣಾ ವ್ಯವಸ್ಥೆ ಕಲ್ಪಿಸಲು ಆದ್ಯತೆ ನೀಡುವಂತೆ ಸೂಚಿಸಿದರು.

ಸ್ಥಳ ಪರಿಶೀಲನೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಹಾಐಕ ಆಯುಕ್ತ ಕೆ.ರಾಜು ಅವರು, ಮಳೆಗಾಲದ ಪೂರ್ವಭಾವಿ ಸಿದ್ದತೆಯ ಕುರಿತಂತೆ ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಅಪರ ಜಿಲ್ಲಾಧಿಕಾರಿಗಳು ಹೆದ್ದಾರಿ ಗುತ್ತಿಗೆ ಕಂಪೆನಿಯವರೊAದಿಗೆ ಮಾತುಕತೆ ನಡೆಸಿದ್ದಾರೆ. ಮುಂಬರುವ ಮಳೆಗಾಲದ ಅವಧಿಯಲ್ಲಿ ಹೆದ್ದಾರಿಯ ಕಾಮಗಾರಿಯಿಂದಾಗಿ ಜನರಿಗೆ ತೊಂದರೆಯಾಗಬಾರದು ಎನ್ನುವ ದಿಸೆಯಲ್ಲಿ ಬುಧವಾರ ಬೈಂದೂರು ಭಾಗದ ಪ್ರದೇಶಗಳಿಗೆ ಭೇಟಿ ನೀಡಿ, ಆ ಭಾಗದ ಹೆದ್ದಾರಿ ಗುತ್ತಿಗೆ ವಹಿಸಿಕೊಂಡಿರುವ ಐಆರ್‌ಬಿ ಕಂಪೆನಿಯ ಅಧಿಕಾರಿಗಳಿಂದಿಗೆ ಮಾತುಕತೆ ನಡೆಸಿ ಸೂಕ್ತ ಮುಂಜಾಗ್ರತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಕುಂದಾಪುರ ಭಾಗದ ಪ್ರದೇಶಕ್ಕೆ ಸಂಬAಧಿಸಿದAತೆ ಇಂದು ಐಆರ್‌ಬಿ ಹಾಗೂ ನವಯುಗ ಕಂಪೆನಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತುರ್ತು ಕಾಮಗಾರಿ ಕೈಗೊಳ್ಳಲು ಸೂಚಿಸಲಾಗಿದೆ. ಇನ್ನೂ ೨ ದಿನಗಳಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸುವ ಭರವಸೆ ವ್ಯಕ್ತವಾಗಿದೆ. ಒಂದು ವೇಳೆ ನಿರ್ಲಕ್ಷ÷್ಯ ತೋರಿದ್ದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಗುತ್ತಿಗೆ ಕಂಪೆನಿಯ ಅಧೀಕಾರಿಗಳು, ಕುಂದಾಪುರ ನಗರ ಠಾಣೆಯ ಪಿಎಸ್‌ಐ ಸದಾಶಿವ ಗವರೋಜಿ ಹಾಗೂ ಸಂಚಾರಿ ಠಾಣೆ ಪಿಎಸ್‌ಐ ಸುದರ್ಶನ್ ಇದ್ದರು.


Spread the love