ಕುಕ್ಕರ್ ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ‌ ಗೃಹ ಸಚಿವರ‌ ಭೇಟಿ, ಪರಿಶೀಲನೆ

Spread the love

ಕುಕ್ಕರ್ ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ‌ ಗೃಹ ಸಚಿವರ‌ ಭೇಟಿ, ಪರಿಶೀಲನೆ

ಮಂಗಳೂರು: ನಗರದ ನಾಗೋರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವರಾದ ಆರಗ‌ ಜ್ಞಾನೇಂದ್ರ ಅವರು‌ ನ.23ರ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಈ ವೇಳೆ ಶಾಸಕ ಭರತ್ ಶೆಟ್ಟಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಐಜಿಪಿ ಪ್ರವೀಣ್ ಸೂದ್, ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಐಜಿಪಿ ಚಂದ್ರಗುಪ್ತ, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಡಿಸಿಪಿ ಅನುಷ್ ಕುಮಾರ್ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಶನಿವಾರ ಸಂಜೆ ಸಂಭವಿಸಿದ ಈ ಸ್ಫೋಟದಲ್ಲಿ ಆರೋಪಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಮುಹಮ್ಮದ್ ಶಾರಿಕ್(24) ಹಾಗೂ ಆಟೊ ರಿಕ್ಷಾ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾರೆ.


Spread the love

Leave a Reply

Please enter your comment!
Please enter your name here