ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಚಾಲಕ – ಮೂವರು ಆಸ್ಪತ್ರೆಗೆ ದಾಖಲು

Spread the love

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಚಾಲಕ – ಮೂವರು ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಕಾರನ್ನು ಅಡ್ಡಾದಿಡ್ಡಿ ಚಲಾಯಿಸಿ ಬೈಕ್ ಮತ್ತು ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರಿನ ಐಜಿ ರಸ್ತೆಯಲ್ಲಿ ಗುರುವಾರ ನಡೆದಿದೆ.

ಘಟನೆಯಲ್ಲಿ ಬೈಕಿನಲ್ಲಿದ್ದ ಮಗು ಮತ್ತು ಇಬ್ಬರಿಗೆ ಗಂಭೀರ ಗಾಯವಾಗಿದ್ದು, ರೊಚ್ಚಿಗೆದ್ದ ಸ್ಥಳೀಯರು ಕಾರನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದ್ದಾರೆ. ಗಂಭಿರವಾಗಿ ಗಾಯಗೊಂಡ ಮೂವರು ವ್ಯಕ್ತಿಗಳು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚಿಕ್ಕಮಗಳೂರು ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love