ಕುದ್ರೋಳಿ ದೇವಸ್ಥಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

Spread the love

ಕುದ್ರೋಳಿ ದೇವಸ್ಥಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಮಂಗಳೂರು: ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬುಧವಾರ ಭೇಟಿ ನೀಡಿ ದೇವರ ದರ್ಶನ್ ಪಡೆದರು.

ಈ ವೇಳೆ ದೇವಳದ ವತಿಯಿಂದ ಸಿಎಂ ಗೆ ಸನ್ಮಾನ ಮಾಡಲಾಯಿತು.

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಸುನೀಲ್ ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೊಲೀಸ್ ಆಯುಕ್ತ ಶಶಿಕುಮಾರ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರು, ದೇವಾಲಯದ ಅಧ್ಯಕ್ಷರಾದ ಸಾಯಿರಾಂ ಉಪಸ್ಥಿತರಿದ್ದರು


Spread the love