
Spread the love
ಕುಶಾಲನಗರ: ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಸಾವು
ಮಡಿಕೇರಿ: ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿಯೋರ್ವ ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ.
ಕೀರ್ತನ್ (12) ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ.
ಶನಿವಾರ ತಡರಾತ್ರಿ ಮಲಗಿದ್ದಾಗ ಎರಡು ಬಾರಿ ಎದೆನೋವು ಎಂದು ಕಿರುಚಿ ಅಸ್ವಸ್ಥನಾದ. ಕುಶಾಲನಗರ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾನೆ.
ಈತ ಸಮೀಪದ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದ ಭಾರತಮಾತಾ ಶಾಲೆಯಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಈತನ ತಂದೆ ಮಂಜಾಚಾರಿ ಇದೇ ಶಾಲೆಯಲ್ಲಿ ಬಸ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಈ ಮೊದಲು ಬಾಲಕನಿಗೆ ಹೃದಯದ ತೊಂದರೆ ಇರಲಿಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Spread the love