
ಕೃಷ್ಣಾಪುರ ಪರ್ಯಾಯ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ
ಉಡುಪಿ: ಶ್ರೀಕೃಷ್ಣಾಪುರದ ಪರ್ಯಾಯೋತ್ಸವಕ್ಕೆ ಉಡುಪಿ ಜಿಲ್ಲಾ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಟ್ರಸ್ಟಿನ ವತಿಯಿಂದ ಹೊರೆಕಾಣಿಕೆ ಸಮರ್ಪಣೆಯು ನಡೆಯಿತು.
ಮಾಜಿ ಶಾಸಕ ಅಪ್ಪಣ್ಣ ಹೆಗ್ಡೆ ಅವರು ಜೋಡುಕಟ್ಟೆಯಲ್ಲಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು
ಪರ್ಯಾಯೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ರಘುಪತಿ ಭಟ್ ಪ್ರಸ್ತಾವಿಸಿ ಕೆಲವೇ ಶ್ರೀಮಂತರು ಸೇರಿ ಕಾರ್ಯಕ್ರಮ ಮಾಡುವುದಕ್ಕಿಂತ ಸಮಾಜದ ಪ್ರತಿಯೊಬ್ಬರೂ ತಮ್ಮ ಕಾಣಿಕೆಯನ್ನು ನೀಡಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗಹಿಸುವುದರಿಂದ ಮಹತ್ವ ಬರುತ್ತದೆ.ಕೃಷ್ಣ ಭಕ್ತರೆಲ್ಲರೂ ತಮ್ಮಿಂದ ಆಗುವಂತಹ ಕಾಣಿಕೆಗಳನ್ನು ನೀಡಿ ಪುನೀತರಾಗಿದ್ದೀರಿ ಎಂದರು.
ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಸ್ವಾಗತಿಸಿ ವಂದಿಸಿದರು. ಹೊರೆಕಾಣಿಕೆ ಸಮಿತಿಯ ಸಂಚಾಲಕರಾದ ಸುಪ್ರಸಾದ್ ಶೆಟ್ಟಿ ಮೆರವಣಿಗೆಯ ವ್ಯವಸ್ಥೆಯನ್ನು ಮಾಡಿದರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಟ್ರಷ್ಟಿನ ಮುಖ್ಯಕಾರ್ಯನಿರ್ವಹಣಾ ಅಧಿಕಾರಿಗಳಾದ ಡಾ. ಎಲ್.ಎಚ್.ಮಂಜುನಾಥ್, ಪ್ರದೇಶಾಯಿಕ ನಿರ್ದೇಶಕರಾದ ವಸಂತ ಸಾಲ್ಯಾನ್,ಜಿಲ್ಲಾ ನಿರ್ದೇಶಕರಾದ ಗಣೇಶ್,ತಾಲೂಕು ನಿರ್ದೇಶಕರಾದ ರಾಮ್ ಕುಮಾರ್ ಹಾಗೂ ಪದಾಧಿಕಾರಿಗಳು,ಸದಸ್ಯರು ಭಾಗವಹಿಸಿದ್ದರು.