ಕೃಷ್ಣ ಮಠಕ್ಕೆ  ಕರ್ನಾಟಕ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್  ಭೇಟಿ

Spread the love

ಕೃಷ್ಣ ಮಠಕ್ಕೆ  ಕರ್ನಾಟಕ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್  ಭೇಟಿ

ಉಡುಪಿ: ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.

ವಿವಿಧ ಕಾರ್ಯಕ್ರಮ ನಿಮಿತ್ತ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿರುವ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಳಿಗ್ಗೆ ಶ್ರೀ ಕೃಷ್ಣನ ದರ್ಶನ ಮಾಡಿ ಬಳಿಕ ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಶ್ರೀ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ವೇಳೆ ಸ್ವಾಮೀಜಿಯವರು ರಾಜ್ಯಪಾಲರನ್ನು ಮಠದ ವತಿಯಿಂದ ಸನ್ಮಾನಿಸಿದರು.

ಈ ವೇಳೆ ಉಡುಪಿ ಶಾಸಕ ರಘುಪತಿ ಭಟ್‌, ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ, ಜಿಪಂ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್‌ ಭಟ್‌, ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ಎನ್‌ ವಿಷ್ಣುವರ್ಧನ್‌, ಮಠದ ವ್ಯವಸ್ಥಾಪಕರಾದ ಗೋವಿಂದರಾಜ್, ಶ್ರೀ ಕೃಷ್ಣಾಸೇವಾ ಬಳಗದ ಪ್ರದೀಪ್ ರಾವ್ ಹಾಗೂ ಇತರರು ಉಪಸ್ಥಿತರಿದ್ದರು.


Spread the love