ಕೆಎಸ್ ಆರ್ ಟಿಸಿಯಿಂದ 1500 ಹೆಚ್ಚುವರಿ ಬಸ್ ವ್ಯವಸ್ಥೆ

Spread the love

ಕೆಎಸ್ ಆರ್ ಟಿಸಿಯಿಂದ 1500 ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ನಿಗಮವು ಅಕ್ಟೋಬರ್ 24 ರಂದು ನರಕ ಚತುರ್ದಶಿ ಹಾಗೂ ಅಕ್ಟೋಬರ್ 26 ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 21 ರಿಂದ ಕ್ಟೋಬರ್ 23 ರವರೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.

ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಅಕ್ಟೋಬರ್ 26 ರಿಂದ ಅಕ್ಟೋಬರ್ 30 ವರೆಗೆ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಇ-ಟಿಕೇಟ್ ಬುಕಿಂಗ್‍ನ್ನು  www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕ್ಕಿಂಗ್ ಕೌಂಟರ್‍ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವÀ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಾಗಿದೆ. ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಗೆ ತೆರಳಲಿದೆ.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

ಬೆಂಗಳೂರು ನಗರದ ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.


Spread the love