ಕೆಕ್ಕನಹಳ್ಳ ಚೆಕ್ ಪೋಸ್ಟ್ ಗೆ ಸಚಿವ ಎಸ್. ಟಿ. ಸೋಮಶೇಖರ್ ಭೇಟಿ

Spread the love

ಕೆಕ್ಕನಹಳ್ಳ ಚೆಕ್ ಪೋಸ್ಟ್ ಗೆ ಸಚಿವ ಎಸ್. ಟಿ. ಸೋಮಶೇಖರ್ ಭೇಟಿ

ಚಾಮರಾಜನಗರ: ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಜಿಲ್ಲೆಯಲ್ಲಿ ಸೋಂಕು ವ್ಯಾಪಿಸದಂತೆ ತಡೆಯುವ ನಿಟ್ಟಿನಲ್ಲಿ ನಿರ್ದಾಕ್ಷಿಣ್ಯ ಕ್ರಮಗಳನ್ನು ಅನುಸರಿಸಲು ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಸೂಚಿಸಿದ್ದಾರೆ.

ಕೋವಿಡ್ ಹಾಗೂ ನೆರೆ ಹಾವಳಿ ಪರಿಹಾರ ಕಾರ್ಯಗಳ ನಿರ್ವಹಣೆ ಕುರಿತಂತೆ ಗುಂಡ್ಲುಪೇಟೆ ತಾಲೂಕಿನ ಗಡಿ ಭಾಗದಲ್ಲಿರುವ ಕೆಕ್ಕನಹಳ್ಳ ಚೆಕ್‍ಪೋಸ್ಟ್‍ಗೆ ಭೇಟಿ ನೀಡಿ ವಾಹನಗಳ ತಪಾಸಣೆಗೆ ಕೈಗೊಂಡಿರುವ ಕ್ರಮಗಳನ್ನು ಖುದ್ದು ಪರಿಶೀಲನೆ ನಡೆಸಿದರು. ಪ್ರತಿದಿನ ಎಷ್ಟು ವಾಹನಗಳು ಸಂಚರಿಸುತ್ತಿವೆ. ಯಾವ ಬಗೆಯ ಕಟ್ಟುನಿಟ್ಟಿನ ಕ್ರಮಗಳನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂಬ ಬಗ್ಗೆ ವಿವರ ಪಡೆದುಕೊಂಡರು.

ಗಡಿಭಾಗದಿಂದ ಜಿಲ್ಲೆಗೆ ಪ್ರವೇಶಿಸುವ ವಾಹನಗಳ ಪ್ರಯಾಣಿಕರು ಈಗಾಗಲೇ ಹೊರಡಿಸಲಾಗಿರುವ ಮಾರ್ಗಸೂಚಿ ಆದೇಶಗಳನ್ನು ಪಾಲನೆ ಮಾಡಬೇಕಿದೆ. ಸೂಕ್ತ ದಾಖಲೆಗಳನ್ನು ನೀಡದಿದ್ದಲ್ಲಿ ವಾಹನಗಳನ್ನು ಮುಲಾಜಿಲ್ಲದೆ ವಾಪಸ್ ಕಳುಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅಂತಾರಾಜ್ಯ ವಹಿವಾಟು ಸೇರಿದಂತೆ ಯಾವುದೇ ರೀತಿಯ ವ್ಯಾಪಾರಗಳಿಗೆ, ಇನ್ನಿತರ ಚಟುವಟಿಕೆಗೆ ತೊಂದರೆಯಾಗಬಾರದು. ಆದರೆ, ಕೋವಿಡ್ ನಿಯಂತ್ರಣ ಸಂಬಂಧ ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯ ಎಂದರು.

ಇದೇ ವೇಳೆ ಶಾಸಕರಾದ ಎನ್. ಮಹೇಶ್, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಚೆಕ್ ಪೋಸ್ಟ್ ನೋಡಲ್ ಅಧಿಕಾರಿ ರಾಜು, ಇತರರು ಇದ್ದರು.


Spread the love