ಕೆಜೆ ಹಳ್ಳಿ ಘಟನೆ ವಿಚಾರದಲ್ಲಿ ಸರ್ಕಾರ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲಿ: ಡಿ ಕೆ ಶಿವಕುಮಾರ್

Spread the love

ಕೆಜೆ ಹಳ್ಳಿ ಘಟನೆ ವಿಚಾರದಲ್ಲಿ ಸರ್ಕಾರ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲಿ: ಡಿ ಕೆ ಶಿವಕುಮಾರ್

ಬೆಂಗಳೂರು: ‘ಡಿ.ಜೆ ಹಳ್ಳಿ ಘಟನೆಯನ್ನು ನಾನು ಖಂಡಿಸುತ್ತೇನೆ. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಕೆಪಿಸಿಸಿ ಅಧ್ಯಕ್ಷ ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ‘ಇದು ಸಮಾಜಘಾತುಕ ಕೃತ್ಯ, ಶಾಸಕರ ಆಸ್ತಿಯಾಗಲಿ, ಸಾಮಾನ್ಯ ಜನರ ಆಸ್ತಿಯೇ ಆಗಿರಲಿ, ಪೊಲೀಸ್ ಠಾಣೆಯಾಗಿರಲಿ ಯಾವುದನ್ನು ಹಾನಿ ಮಾಡುವುದು ಸರಿಯಲ್ಲ. ಇದನ್ನು ಯಾರೂ ಒಪ್ಪಲು ಸಾಧ್ಯವಿಲ್ಲ’ ಎಂದರು.

‘ಅವಹೇಳನಕಾರಿ ಟೀ ಟ್ ಮಾಡಲಾಗಿದೆ ಎಂಬುದನ್ನು ಮಾಧ್ಯಮಗಳ ಮೂಲಕ ತಿಳಿದು ಬಂದಿದೆ. ಇನ್ನು ಯಾರು ಮಾಡಿದರೂ ತಪ್ಪೇ. ಇಡೀ ಪ್ರಕರಣವೇ ತಪ್ಪಾಗಿದೆ. ಬೆಂಗಳೂರು ನಗರ ಶಾಸಕರ ಸಭೆ ಕರೆದಿದ್ದಾರೆ, ಚರ್ಚೆ ಮಾಡಿ ಮುಂದಿನ ಹೆಜ್ಜೆ ನಿಲುವು ಬಗ್ಗೆ ತಿಳಿಸುತ್ತೇನೆ. ನಮ್ಮ ಶಾಸಕರು ಪರಿಸ್ಥಿತಿ ನಿಯಂತ್ರಿಸಲು ಪ್ರಯತ್ನಿಸಿದ್ದು, ನಿಯಂತ್ರಣ ಸಾಧ್ಯವಾಗಿಲ್ಲ. ಇಲ್ಲಿ ಬಹಳ ವ್ಯವಸ್ಥಿತವಾಗಿ ಸಂಚು ಇದೆ ಎಂದು ಮಾಧ್ಯಮಗಳ ಮೂಲಕ ತಿಳಿದುಬಂದಿದೆ. ಪಕ್ಷ ಇದನ್ನು ಖಂಡಿಸುತ್ತದೆ. ಸರ್ಕಾರ ಯಾವುದೇ ರೀತಿಯ ಕಾನೂನು ಕ್ರಮ ಕೈಗೊಂಡರೂ ಯಾವುದೇ ಅಭ್ಯಂತರವಿಲ್ಲ. ನಾವು ಸಹಕಾರ ನೀಡುತ್ತೇವೆ’ ಎಂದರು.

ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್, ಸಚಿವ ಸಿ.ಟಿ ರವಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ‘ಈ ಸಮಯದಲ್ಲಿ ಪ್ರಚೋದನಕಾರಿ ಹೇಳಿಕೆಗೆ ಅವಕಾಶ ನೀಡಬಾರದು. ಅವರು ಅವರ ರಾಜಕಾರಣ ಮಾಡಲಿ. ನಾನು ಯಾರಿಗೂ ಉತ್ತರ ಕೊಡುವುದಿಲ್ಲ. ನಾನು ಕೂಡ ಶಾಸಕರ ಜತೆ ಚರ್ಚಿಸುತ್ತೇನೆ. ಸ್ಥಳಕ್ಕೆ ಹೋಗಿ ನೋಡಬೇಕಿದೆ, ಶಾಸಕರ ಮನೆಗೆ ಭೇಟಿ ನೀಡಬೇಕು. ಈಗಾಗಲೇ ವಿರೋಧ ಪಕ್ಷದ ನಾಯಕರ ಜತೆ ಮಾತನಾಡಿದ್ದೇನೆ’ ಎಂದರು.


Spread the love