ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಂಗಳೂರಿಗೆ ಆಗಮನ

Spread the love

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಂಗಳೂರಿಗೆ ಆಗಮನ

ಮಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರನ್ನು ಜಿಲ್ಲೆಯ ನಾಯಕರು ಸ್ವಾಗತಿಸಿ ಬರಮಾಡಿಕೊಂಡರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ ರೈ, ಶಾಸಕ ಯು.ಟಿ. ಖಾದರ್, ಮಾಜಿ ಶಾಸಕರಾದ ಅಭಯ ಚಂದ್ರ ಜೈನ್, ಐವನ್ ಡಿಸೋಜ, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ , ಮೊದಲಾದವರು ಉಪಸ್ಥಿತರಿದ್ದರು.

ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿರುವ ಡಿ. ಕೆ ಶಿವಕುಮಾರ್ ಅವರು ಕೇಂದ್ರ ಮಾಜಿ ಸಚಿವರಾದ ಡಾ. ಆಸ್ಕರ್ ಫೆರ್ನಾಂಡಿಸ್, ಮಂಗಳೂರು ಬಿಷಪ್ ರವನ್ನುಭೇಟಿ ಮಾಡಿ ಬಳಿಕ ದ.ಕ.ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ, ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಡಿಕೆಶಿ 3 ಗಂಟೆಗೆ ಮಾಜಿ ಸಚಿವರಾದ ಜನಾರ್ಧನ ಪೂಜಾರಿ ರವರ ಬಂಟ್ವಾಳದ ಮನೆಗೆ ಭೇಟಿ ನೀಡಲಿದ್ದಾರೆ. ಸಂಜೆ 4 ಗಂಟೆಗೆ ಮುಡಿಪುವಿನಲ್ಲಿರುವ ಉಡುಪಿ ಖಾಝಿ ಬೇಕಲ್ ಇಬ್ರಾಹೀಂ ಮುಸ್ಲಿಯಾರ್ ರವರ ಮನೆಗೆ ಭೇಟಿ ನೀಡಿ, ಸಂಜೆ 6:45ಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ರವರನ್ನು ಭೇಟಿ ಮಾಡಲಿದ್ದಾರೆ


Spread the love