ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿಗೆ ಕಾಂಗ್ರೆಸ್ ಮುಖಂಡರಿಂದ ಸ್ವಾಗತ

Spread the love

ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿಗೆ ಕಾಂಗ್ರೆಸ್ ಮುಖಂಡರಿಂದ ಸ್ವಾಗತ

ಉಡುಪಿ: ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಅವರು ನೂತನವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ನಂತರ ಪ್ರಥಮ ಬಾರಿ ಮಂಗಳೂರಿಗೆ ಬಂದಾಗ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಶುಭ ಹಾರೈಸಿ ಸ್ವಾಗತಿಸಲಾಯಿತು.

ಈ ವೇಳೆ ಮಾಜಿ ಸಚಿವರಾದ ಅಭಯಚಂದ್ರ ಜೈನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್, ಕಾಂಗ್ರೆಸ್ ಮುಖಂಡರಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ರಮೇಶ್ ಕಾಂಚನ್, ಯತೀಶ್ ಕರ್ಕೇರಾ, ದಿನೇಶ್ ಪುತ್ರನ್, ಕಿಶನ್ ಹೆಗ್ಡೆ, ಗಣೇಶ್ ನೇರ್ಗಿ, ಸೌರಭ್ ಬಲ್ಲಾಳ್, ಹರೀಶ್ ಕಿಣಿ, ದಿವಾಕರ ಕುಂದರ್, ಸದಾಶಿವ ಕಟ್ಟೆಗುಡ್ಡೆ, ಪ್ರದೀಪ್ ಸೂರಜ್ ಹಾಗೂ ಇತರರು ಉಪಸ್ಥಿತರಿದ್ದರು.


Spread the love

Leave a Reply