
Spread the love
ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್. ಧ್ರುವನಾರಾಯಣ ನಿಧನ
ಚಾಮರಾಜನಗರ: ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರು ಶನಿವಾರ ಬೆಳಗ್ಗೆ ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಒಂಟಿಕೊಪ್ಪಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಆದರೂ ಅವರು ಬದುಕುಳಿದಿಲ್ಲ. ಧ್ರುವನಾಯಣ ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಚಾಮರಾಜನಗರ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಅವರು, ಎರಡು ಬಾರಿ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ವಿ. ಶ್ರೀನಿವಾಸ ಪ್ರಸಾದ್ ಅವರ ಎದುರು ಸೋಲು ಕಂಡಿದ್ದ ಅವರು, ಸದ್ಯ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು.
Spread the love