ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈಗೆ ಜೀವ ಬೆದರಿಕೆ: ದೂರು ದಾಖಲು

Spread the love

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈಗೆ ಜೀವ ಬೆದರಿಕೆ: ದೂರು ದಾಖಲು
 

ಮೂಲ್ಕಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಚುನಾವಣೆ ಉಸ್ತುವಾರಿ ಯಾಗಿರುವ‌ ಮಿಥುನ್ ರೈಯವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ ಕುರಿತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ದೂರು ದಾಖಲಿಸಿದೆ.

ಜೈ ಶ್ರೀರಾಮ್ ಎಂಬ ಹೆಸರಿನ ವಾಟ್ಸ್ ಆಯಪ್ ಗ್ರೂಪ್ ನಲ್ಲಿ ಹನಿ ಹಿಂದೂಸ್ತಾನಿ ಮುಂಬೈ ಎಂಬ ಹೆಸರಿನಲ್ಲಿ “ಮಿಥುನ್ ರೈಯವರಿಗೆ ಗುಂಡಿನೂಟ ಮಾಡಿಸುತ್ತೇನೆ” ಎಂಬ ವಿಚಾರವನ್ನೊಳಗೊಂಡ ಕೊಲೆ ಬೆದರಿಕೆ ಪೋಸ್ಟ್ ಒಂದನ್ನು ಹಾಕಲಾಗಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಜೀವ ಬೆದರಿಕೆಯ ಪೋಸ್ಟ್ ಗಳನ್ನು ಹಾಕುತ್ತಿರುವ ವ್ಯಕ್ತಿಗಳು ಹಾಗೂ ಹನಿ ಹಿಂದೂಸ್ತಾನಿ ಮುಂಬೈ ಇವರನ್ನು ಪತ್ತೆಹಚ್ಚಿ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಕೂಡಲೇ ಮಿಥುನ್ ರೈಯವರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್‌ ಕೋಟ್ಯಾನ್ ನೀಡಿರುವ ದೂರಿನಲ್ಲಿ ಆಗ್ರಹಿಸಿದ್ದಾರೆ.


Spread the love

Leave a Reply

Please enter your comment!
Please enter your name here