Home Mangalorean News Kannada News ಕೆಲಸದ ವಿಚಾರಕ್ಕೆ ತಕರಾರು: ಮೆಸ್ಕಾಂ ಸಹಾಯಕ ಇಂಜಿನಿಯರ್ ವಿರುದ್ಧ ದೂರು, ರಾಜಿ ಮೂಲಕ ಪ್ರಕರಣ ಇತ್ಯರ್ಥ

ಕೆಲಸದ ವಿಚಾರಕ್ಕೆ ತಕರಾರು: ಮೆಸ್ಕಾಂ ಸಹಾಯಕ ಇಂಜಿನಿಯರ್ ವಿರುದ್ಧ ದೂರು, ರಾಜಿ ಮೂಲಕ ಪ್ರಕರಣ ಇತ್ಯರ್ಥ

Spread the love

ಕೆಲಸದ ವಿಚಾರಕ್ಕೆ ತಕರಾರು: ಮೆಸ್ಕಾಂ ಸಹಾಯಕ ಇಂಜಿನಿಯರ್ ವಿರುದ್ಧ ದೂರು, ರಾಜಿ ಮೂಲಕ ಪ್ರಕರಣ ಇತ್ಯರ್ಥ

ಸುಳ್ಯ: ಕೆಲಸದ ವಿಚಾರವಾಗಿ ಮೆಸ್ಕಾಂ ಕಚೇರಿಯಲ್ಲಿ ಸಹಾಯಕ ಇಂಜಿನಿಯರ್ ಹಾಗೂ ಸಿಬ್ಬಂದಿ ನಡುವೆ ನಡೆದ ವಾಗ್ವಾದವು ಪೊಲೀಸ್ ಠಾಣೆಯ ಮೆಟ್ಟಿಲೇರಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಸುಳ್ಯ ನಿವಾಸಿ ರಾಘವ ಶೆಟ್ಟಿ ಅವರು ನೀಡಿದ ದೂರಿನ ಪ್ರಕಾರ, ಆಗಸ್ಟ್ 2ರಂದು ಸುಳ್ಯ ಮೆಸ್ಕಾಂ ಕಂಟ್ರೋಲ್ ರೂಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ, ಮೆಸ್ಕಾಂ ಕಚೇರಿಯ ಸಹಾಯಕ ಇಂಜಿನಿಯರ್ (ಎಇ) ಸುಪ್ರೀತ್ ಅವರು ಸ್ಥಳಕ್ಕೆ ಬಂದು ಕೆಲಸದ ವಿಚಾರವಾಗಿ ತಕರಾರು ತೆಗೆದಿದ್ದಾರೆ ಎನ್ನಲಾಗಿದೆ.

ಈ ವೇಳೆ ಆರೋಪಿತರು ದೂರುದಾರರ ಮೊಬೈಲ್ ಫೋನ್ ಕಸಿದು ನೆಲಕ್ಕೆ ಬಡಿದು ಹಾನಿಗೊಳಿಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಎನ್‌ಸಿ ಸಂಖ್ಯೆ 79/SUL/NCR/2026ರಂತೆ ದೂರು ದಾಖಲಿಸಿಕೊಂಡು, ಇಬ್ಬರನ್ನೂ ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ.

ವಿಚಾರಣೆ ವೇಳೆ ದೂರುದಾರ ಹಾಗೂ ಎದುರಿದಾರರು ಪರಸ್ಪರ ಮಾತುಕತೆ ನಡೆಸಿ ರಾಜಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ, ಪ್ರಕರಣವನ್ನು ಸ್ಥಳದಲ್ಲೇ ಇತ್ಯರ್ಥಪಡಿಸಲಾಗಿದೆ.


Spread the love

Exit mobile version